ರಾಯಚೂರು: ಜೂ-19:
ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ ಪಾಟೀಲರ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಪಾರಸಮಲ್ ಸುಖಾಣಿ ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ವಿಧಾನ ಪರಿಷತ ಸದಸ್ಯ ಎ.ವಸಂತ ಕುಮಾರ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಪಾಟೀಲ್ ಇಟಗಿ ತಿಳಿಸಿದ್ದಾರೆ.
ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ರಾಯಚೂರು ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿರುವುದಕ್ಕೆ ಅಸರ್ಮಥರು ಅಂತಹ ಹೇಳಿಕೆ ಕೊಟ್ಟಿರುವುದು ಖಂಡನೀಯ. ಈ ಹೇಳಿಕೆ ನೀಡಿರುವುದು ಹಿರಿಯ ಕಾಂಗ್ರೆಸ್ ನಾಯಕರಾದ ಸುಖಾಣಿ ಅವರಿಗೆ ಶೋಭೆ ತರುವಂತದಲ್ಲ. ತಮ್ಮ ಯಾವುದೇ ವಿಷಯದಲ್ಲಿ ಸ್ಪಷ್ಟನೆ ಬೇಕಾದರೆ ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳತಕ್ಕದ್ದು. ಈ ರೀತಿ ಹೇಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯುಂಟಾಗುತ್ತದೆ. ಇದರ ಹಿಂದೆ ಸಚಿವ ಡಾ. ಶರಣಪ್ರಕಾಶ ಪಾಟೀಲ್ ವಿರುದ್ಧ ರಾಜಕೀಯ ಷಡ್ಯಂತರ ಇರಬಹುದು ಎಂಬ ಅರ್ಥ ಕಾಣುತ್ತದೆ. ಈ ವಿಷಯದ ಬಗ್ಗೆ ವರಿಷ್ಠರ ಗಮನಕ್ಕೆ ತರಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.