ಕೊಪ್ಪಳ,ಅ.೧೮ : ಜಿಲ್ಲೆಯ ಯಲಬುರ್ಗಾ ಪಟ್ಟಣದ ತಂಬಾಕು ಪದಾರ್ಥಗಳ ಮಾರಾಟ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ತಪಾಸಣಾ ತಂಡವು ಅಕ್ಟೋಬರ್ ೧೮ರಂದು ದಾಳಿ ಮಾಡಿ ಪ್ರಕರಣಗಳನ್ನು ದಾಖಲಿಸಿದೆ.
ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ “ತಂಬಾಕು ಮುಕ್ತ ಯುವ ಅಭಿಯಾನ ೨.೦” ಅಂಗವಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಯಲಬುರ್ಗಾ ತಾಲೂಕಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಹಾಗೂ ಪೋಲಿಸ್ ಇಲಾಖೆ ಸಹಯೋಗದಲ್ಲಿ ಕೊಟ್ಪಾ-೨೦೦೩ ಕಾಯ್ದೆಯಡಿಯಲ್ಲಿ ತಂಬಾಕು ಅಥವಾ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ಮಾಡಿ ಸೆಕ್ಷನ್ ೪ರಡಿಯಲ್ಲಿ ೧೧ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.