ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಕ್ರಾಸ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಮ್ಯಾಕ್ಸ್ ಪಿಕಪ್ ವಾಹನ ಹಳ್ಳದ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ನಾಗರಾಜ್, ಸೋಮ, ನಾಗಭೂಷಣ, ಮುರಳಿ ಸ್ಥಳದಲ್ಲೇ ಮೃತಪಟ್ಟಿದ್ದು ಚಾಲಕ ಆನಂದ ತೀವ್ರ ಗಾಯಗೊಂಡ ಹಿನ್ನಲೆ ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅಪಘಾತಗೊಳ್ಳಗಾದ ಗಾಯಾಳುಗಳು ಹಾಗೂ ಮೃತರು ತೆಲಂಗಾಣ ರಾಜ್ಯದ ಹಿಂದೂಪುರ ನಿವಾಸಿಗಳು ಎಂದು ಹೇಳಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣಕ್ಕೆ ಕುರಿ ವ್ಯಾಪಾರಕ್ಕಾಗಿ ತೆರಳುತ್ತಿದ್ದರು. ಬೆಳಗಿನ ಜಾವ 3 ಗಂಟೆ ಸುಮಾರು ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎನ್ನಲಾಗಿದೆ.
ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.