ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಂದ ಜಾಗೃತಿ ಅರಿವು ಸಪ್ತಾಹ ಪ್ರತಿಜ್ಞಾ ವಿಧಿ ಭೋಧನೆ

Eshanya Times

ಕೊಪ್ಪಳ, ಅ ೨೮ : ಕೇಂದ್ರ ವಿಚಕ್ಷಣ ಆಯೋಗವು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಅಕ್ಟೋಬರ್. ೨೮ ರಿಂದ ನವೆಂಬರ್.೩ ರವರೆಗೆ ಜಾಗೃತಿ ಅರಿವು ಸಪ್ತಾಹ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸೋಮವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಾಗೃತಿ ಅರಿವು ಸಪ್ತಾಹ ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬೋಧಿಸಿದರು.
ಈ ವರ್ಷದ ಜಾಗೃತಿ ಅರಿವು ಸಪ್ತಾಹದ ವಿಷಯವು culture of integrity for Nations prosperity ಆಗಿರುತ್ತದೆ. ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರವನ್ನು ತೊಲಗಿಸಿ ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ರೂಪಿಸಿ ಪರಿಣಾಮಕಾರಿಯಾಗಿ ಅವುಗಳನ್ನು ಜಾರಿಗೊಳಿಸಲು ಮತ್ತು ಇಂದಿನ ವ್ಯವಸ್ಥೆಯನ್ನು ಸುಧಾರಿಸಲು ಸಂಬAಧಪಟ್ಟವರೆಲ್ಲರನ್ನು ಒಗ್ಗೂಡಿಸಿ ಜಾಗೃತಿ ಮೂಡಿಸುವುದು ಈ ಸಪ್ತಾಹದ ಉದ್ದೇಶವಾಗಿರುತ್ತದೆ.
ಈ ಸಂದರ್ಭದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಅಬಕಾರಿ ಉಪಾಧೀಕ್ಷಕರಾದ ಬಾರತಿ, ಗ್ರೇಡ್-೨ ತಹಶಿಲ್ದಾರರಾದ ವಿನಾಯಕ ಗೊಢಬೋಲೆ, ರವಿಕುಮಾರ್ ವಸ್ತ್ರದ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಕಛೇರಿಯ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";