ಬಳ್ಳಾರಿ,ಜೂ.೦3 :
ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಪೂರೈಸುವ ನಿಟ್ಟಿನಲ್ಲಿ ಜಿಲ್ಲೆಯ ಕೃಷಿ ಪರಿಕಗಳ ಮಾರಾಟ ಮಳಿಗೆಗಳಿಗೆ ಕೃಷಿ ಇಲಾಖೆಯ ಅಧಿಕಾರಿಗಳು ಶನಿವಾರದಂದು ದಿಢೀರ್ ಭೇಟಿ ನೀಡಿ ದಾಸ್ತಾನು ಹಾಗೂ ಲೆಕ್ಕ ಪತ್ರಗಳನ್ನು ಪರಿಶೀಲನೆ ಮಾಡಿದರು.
ಜಿಲ್ಲೆಯಾದ್ಯಂತ ೯೨ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ, ತಪಾಸಣೆ ನಡೆಸಿ ವಿವಿಧ ಕಾಯ್ದೆಗಳನ್ನು ಉಲ್ಲಂಘನೆ ಮಾಡಿದ ೭೧ ಮಾರಾಟ ಮಳಿಗೆಗಳಿಗೆ ನೋಟೀಸ್ ನೀಡಿದರು.
ವಿವಿಧ ಪರಿಕರ ಮಾರಾಟ ಮಳಿಗೆಗಳಿಂದ ನಿಯಮಾನುಸಾರ ೨೬ ಮಾದರಿಗಳನ್ನು ಸಂಗ್ರಹಿಸಿ ಬಿತ್ತನೆ ಬೀಜ, ರಸಗೂಬ್ಬರ ಹಾಗೂ ಕೀಟ ನಾಶಕಗಳ ಗುಣಮಟ್ಟ ನಿಯಂತ್ರಣ ಪರಿಶೀಲನೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಯಿತು.
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ತಿರುಮಲೇಶ ಅವರು ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳ ಕೊರತೆ ಇರುವುದಿಲ್ಲ. ರೈತರು ಕೃಷಿ ಪರಿಕರಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸಿ, ಕಡ್ಡಾಯವಾಗಿ ಬಿಲ್-ರಶೀದಿಗಳನ್ನು ಪಡೆಯಬೇಕು ಎಂದು ಹೇಳಿದರು.
ಈ ವೇಳೆ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಇತರರು ಇದ್ದರು.
ಕೃಷಿ ಪರಿಕಗಳ ಮಾರಾಟ ಮಳಿಗೆಗಳಿಗೆ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ
WhatsApp Group
Join Now