ರಾಯಚೂರು,ಆ.5: ಪಿಯು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕೆಂದು ಒತ್ತಾಯಿಸಿ ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರದ ಟಿಪ್ಪು ಸುಲ್ತಾನ್ ಗಾರ್ಡನಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಓ ಜಿಲ್ಲಾಧ್ಯಕ್ಷ ಹಯ್ಯಾಳಪ್ಪ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸೇರಿದಂತೆ ಹಲವು ವಿಭಾಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವು ಮಂಜೂರಾಗಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಅರ್ಜಿ ಹಾಕಿದ್ದ ವಿದ್ಯಾರ್ಥಿವೇತನಗಳು ಇಲ್ಲಿಯವರೆಗೂ ಕೂಡ ವಿದ್ಯಾರ್ಥಿಗಳಿಗೆ ದೊರೆತಿಲ್ಲ. ಇನ್ನು ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶಿಷ್ಯವೇತನವನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ.ಈಗಾಗಲೇ ಎಲ್ಲಾ ಹಂತದ ಶಿಕ್ಷಣವು ವ್ಯಾಪಾರಿಕರಣಗೊಂಡು ಶುಲ್ಕಗಳು ಗಗನಕ್ಕೇರಿವೆ. ಬಡ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುವುದು ಅತ್ಯಂತ ದುಸ್ತರವಾಗಿರುವ ಇಂದಿನ ಪರಿಸ್ಥಿತಿಯಲ್ಲಿ ಸರ್ಕಾರದ ಶಿಷ್ಯವೇತನವು ಸಾಕಷ್ಟು ಸಹಕಾರಿಯಾಗಿದೆ.
ಈ ಶಿಷ್ಯವೇತನದಿಂದಾಗಿ ಬಡ ವಿದ್ಯಾರ್ಥಿಗಳು ಪಿಯ,ಪದವಿ ಸೇರಿದಂತೆ ಇಂಜಿನಿಯರಿAಗ್ ಮತ್ತು ಮೆಡಿಕಲ್ ನಂತಹ ಉನ್ನತ ವ್ಯಾಸಂಗವನ್ನು ಕೂಡ ಪಡೆಯಬಹುದಾಗಿದೆ. ಆದರೆ ಈಗ ಭಾರೀ ಪ್ರಮಾಣದಲ್ಲಿ ಶಿಷ್ಯವೇತನದ ಮೊತ್ತವನ್ನು ಕಡಿತಗೊಳಿಸಿರುವುದು ಹಾಗೂ ವಿತರಣೆಯಲ್ಲಿ ದೀರ್ಘ ವಿಳಂಬವಾಗಿರುವುದು ಕಾರ್ಮಿಕರ ಹಾಗೂ ಬಡಮಕ್ಕಳ ಶಿಕ್ಷಣದ ಕನಸುಗಳನ್ನು ಚಿವುಟಿ ಹಾಕಿದಂತಾಗಿದೆ ಎಂದರು.
ತದನಂತರ ಮಾತನಾಡಿದ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಬಸವರಾಜ್ ಮಾತನಾಡಿ, ಜನಸಾಮಾನ್ಯರಿಂದ ಸಂಗ್ರಹವಾಗಿರುವ ತೆರಿಗೆ ದುಡ್ಡನ್ನು ಶಿಕ್ಷಣಕ್ಕೆ ಆದ್ಯತೆ ನೀಡಿ ಸರ್ಕಾರವು ವಿನಿಯೋಗಿಸಬೇಕು. ಸೆಸ್ ಹೆಸರಲ್ಲಿ ಸಂಗ್ರಹವಾಗುತ್ತಿರುವ ಹಣವು ಕಾರ್ಮಿಕ ನಿಧಿಯಲ್ಲಿ ಹೇರಳವಾಗಿ ಶೇಖರಣೆಯಾಗುತ್ತಿದೆ. ಇದು ಕಾರ್ಮಿಕರ ಬೆವರಿನ ಫಲ. ಮತ್ತು ಇದನ್ನು ಸಂಪೂರ್ಣವಾಗಿ ಅವರ ಏಳಿಗೆಗೆ ಬಳಸಬೇಕು. ಘನ ಸರ್ಕಾರವು ಈ ಕುರಿತು ಗಮನ ಹರಿಸಿ ಕೂಡಲೇ ವಿದ್ಯಾರ್ಥಿ ವೇತನಗಳನ್ನು ಮಂಜೂರು ಮಾಡಬೇಕು ಮತ್ತು ಕಡಿತಗೊಳಿಸಿರುವ ಕಾರ್ಮಿಕರ ಮಕ್ಕಳ ಶಿಷ್ಯವೇತನದ ಮೊತ್ತವನ್ನು ಹೆಚ್ಚಿಸಬೇಕು.ಈ ಮೂಲಕ ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ರಾಜ್ಯ ಸರ್ಕಾರವು ನೆರವಾಗಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಉಪಾಧ್ಯಕ್ಷರಾದ ಪೀರ್ ಸಾಬ್, ಖಜಾಂಕ್ಷಿ ಅಮೋಘ ಹಾಗೂ ನಿತಿನ್,ವೀರೇಶ್,ಪ್ರಿಯಾಂಕಾ,ಪಲ್ಲವಿ, ನೇತ್ರ, ಹನುಮಂತಿ, ಭಾವನ, ದೇವಿಂದ್ರಮ್ಮ ಹಾಗೂ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಹೋರಾಟದಲ್ಲಿ ಭಾಗವಹಿಸಿದರು.
ಪಿಯುಸಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಒತ್ತಾಯಿಸಿ ಎಐಡಿಎಸಓ ಪ್ರತಿಭಟನೆ
WhatsApp Group
Join Now