ಬೆಂಗಳೂರು:
ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ಗೆ ಹನ್ನೊಂದು ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ನ ೭ ಅಭ್ಯರ್ಥಿಗಳಾದ ಸಚಿವ ಎನ್.ಎಸ್.ಬೋಸರಾಜು, ಯತೀಂದ್ರ ಸಿದ್ದರಾಮಯ್ಯ, ಕೆ.ಗೋವಿಂದ ರಾಜು, ಎ. ವಸಂತ ಕುಮಾರ್, ಮಾಜಿ ಎಂಎಲ್ಸಿ ಐವಾನ್ ಡಿಸೋಜಾ, ಶಿವಮೊಗ್ಗದ ಬಲ್ಕೀಸ್ ಬಾನು, ಜಗದೇವ್ ಗುತ್ತೇದಾರ್ ಅವಿರೋಧವಾಗಿ ಆಯ್ಕೆಯಾದವರು.
ಬಿಜೆಪಿಯ ಮೂವರು ಅಭ್ಯರ್ಥಿಗಳಾದ ಸಿ.ಟಿ.ರವಿ, ಎನ್.ರವಿಕುಮಾರ್ ಹಾಗೂ ಎಂ.ಜಿ.ಮುಳೆ ಹಾಗೂ ಜೆಡಿಎಸ್ ಅಭ್ಯರ್ಥಿ ಜವರಾಯಿ ಗೌಡ ಅವಿರೋಧವಾಗಿ ಆಯ್ಕೆಯಾದರು.
ವಿಧಾನಸಭೆಯಿಂದ ಪರಿಷತ್ಗೆ ನಡೆಯುವ ಚುನಾವಣೆಗೆ ಒಟ್ಟು 12 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ನಿ0ದ 7, ಬಿಜೆಪಿಯಿಂದ ೩ ಹಾಗೂ ಜೆಡಿಎಸ್ನಿಂದ ೧ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ನಿ0ದ ಆಸಿಫ್ ಪಾಷಾ ಆರ್.ಎಂ. ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆ ವೇಳೆ ಸೂಚಕರಿಲ್ಲದ ಕಾರಣ ಇವರ ನಾಮಪತ್ರ ತಿರಸ್ಕೃತವಾಗಿತ್ತು. ಹೀಗಾಗಿ 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ಆಯ್ಕೆ ಪ್ರಮಾಣ ಪತ್ರ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಶಾಸಕ ಹಂಪನಗೌಡ ಬಾದರ್ಲಿ, ದದ್ದಲ್ ಬಸನಗೌಡ, ರಾಯಚೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ಕೆಪಿಸಿಸಿ ಕಾರ್ಯದರ್ಶಿ ಕೆ. ಅಸ್ಲಂ ಪಾಷಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.