ರಾಯಚೂರು,ಅ.೦2: ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ದಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಅವರು ವಿತರಿರಣೆ ಮಾಡಿದರು.
ಪ್ರೌಢ ಶಾಲೆ ವಿಭಾಗ: ದೇವದುರ್ಗ ತಾಲೂಕಿನ ಮಸರಕಲ್ ಸರ್ಕಾರಿ ಪ್ರೌಢ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ರಾಧಿಕಾ ತಂದೆ ನಿಂಗಯ್ಯ ಪ್ರಥಮ ಸ್ಥಾನ, ರಾಯಚೂರಿನ ಬಸವಶ್ರೀ ಪ್ರೌಢ ಶಾಲೆಯ ವಿದ್ಯಾರ್ಥಿ ಶ್ರೇಯಾ ಆರ್.ಜೆ ದ್ವಿತೀಯ ಸ್ಥಾನ, ಸಿಂಧನೂರಿನ ಆರ್.ಜೆ.ಎಂ.ಪ್ರೌಢ ಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿ ಯಶೋದಾ ತಂದೆ ಬಸವರಾಜ ತೃತೀಯ ಸ್ಥಾನ ಪಡೆದಿದ್ದಾರೆ.
ಪಿಯುಸಿ ವಿಭಾಗ; ಮಾನವಿ ಜಿಲ್ಲೆಯ ಮಾನವಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸುದೀಪ್ ತಂದೆ ನರಸಪ್ಪ ಪ್ರಥಮ ಸ್ಥಾನ, ಜಿಲ್ಲೆಯ ಪೋತ್ನಾಳ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಮಹೇಶ್ವರಿ ತಂದೆ ಮಲ್ಲಯ್ಯ ದ್ವಿತೀಯ ಸ್ಥಾನ, ರಾಯಚೂರಿ ಪ್ರಮಾಣು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಕು.ಜೀವಿತಾ ತೃತೀಯ ಸ್ಥಾನ.
ಸ್ನಾತಕೋತ್ತರ ವಿಭಾಗ; ರಾಯಚೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳಾದ ಪ್ರಮೋದ ಪ್ರಥಮ ಸ್ಥಾನ, ಸದಾಶಿವ ದ್ವಿತೀಯ ಸ್ಥಾನ, ಪ್ರೋತ್ನಾಳ ಸರ್ಕಾರಿ ಪ್ರಥಮ ದರ್ಜೆ ವಿದ್ಯಾರ್ಥಿನಿ ಐಶ್ವರ್ಯ ತಂದೆ ಬಸವಲಿಂಗಪ್ಪ ತೃತೀಯ ಸ್ಥಾನ ಪಡೆದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗಣ್ಯರಿಂದ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಸಂಸದರಾದ ಜಿ.ಕುಮಾರ ನಾಯಕ, ರಾಯಚೂರು ನಗರಸಭೆಯ ಅಧ್ಯಕ್ಷರಾದ ನರಸಮ್ಮ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಂ.ಪುಟ್ಟಮಾದಯ್ಯ, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ, ರಾಯಚೂರು ನಗರ ಕೋಶದ ಯೋಜನಾ ನಿರ್ದೇಶಕರಾದ ಜಗದೀಶ್ ಗಂಗನವರು, ರಾಯಚೂರು ನಗರಾಭಿವೃದ್ಧಿ ಪ್ರಾಧಿಕರದ ಆಯುಕ್ತರಾದ ಮಹ್ಮದ ಜಿಲಾನಿ, ರಾಯಚೂರು ನಗರಸಭೆಯ ಪೌರಾಯುಕ್ತರಾದ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಲಿಂಗರಾಜ್, ಎ.ಪ್ರಕಾಶ್, ರಮೇಶ ಗೌಡೂರು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.