ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಿ – ಬಸನಗೌಡ ದದ್ದಲ್

Eshanya Times

ರಾಯಚೂರು: ಮಾ-5:

ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಆಭಾವಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು, ಎಂದು ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಬಸನಗೌಡ ದದ್ದಲ್ ಹೇಳಿದರು.
ನಗರದ ಅವರ ಕಛೇರಿಯಲ್ಲಿ ಸಭೆ ನಡೆಸಿ ಬೇಸಿಗೆ ಕಾಲ ಆರಂಭವಾಗಿದ್ದು ನಾಲ್ಕು ತಿಂಗಳು ಕಾಲ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರಿನ ಅಭಾವಗಾದಂತೆ ಸೂಕ್ತವಾದ ಕ್ರಮ ಕೈಗೊಳ್ಳಬೇಕು, ಜೊತೆಗೆ ಕುಡಿಯುವ ನೀರಿನ ಅಭಾವತಪ್ಪಿಸಲು ಟಾಸ್ಕ್ ಫೋರ್ಸ್ ಅನ್ನು ರಚಿಸಲಾಗಿದೆ,RWS ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಒಟ್ಟಾಗಿ ಸೇರಿ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಅದೇ ಗ್ರಾಮದಲ್ಲಿ/ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಟ್ರ‍್ಯಾಕ್ಟರ್ ಟ್ಯಾಂಕ್ ಗಳ ಮೂಲಕ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ತಕ್ಷಣವೇ ನೀರು ಒದಗಿಸಬೇಕು, ಟ್ಯಾಂಕರ್ ಮಾಲಿಕರ ಜೊತೆಗೆ ಮಾತಾಡಿ ಅವುಗಳಿಗೆ ದರ ನಿಗದಿ ಮಾಡಿ ಅವುಗಳಿಗೆ ಜಿಪಿಎಸ್ ಅಳವಡಿಸಿ ಗ್ರಾಮಗಳಲ್ಲಿ ಜನರಿಗೆ ನೀರು ಒದಗಿಸಬೇಕು, ಅಗತ್ಯವಿದ್ದ ಕಡೆ ಖಾಸಗಿ ಬೊರ್ ವೆಲ್ ಮಾಲಿಕರ ಜೊತೆಗೆ ಮಾತನಾಡಿ ಅವರ ಗ್ರಾಮಗಳ ಜನರಿಗೆ ಕುಡಿಯುವ ನೀರು ಒದಗಿಸಬೇಕು, ಲೀಜ್ ಅಗ್ರಿಮೆಂಟ್ ಮಾಡಿಕೊಂಡು ಜನರಿಗೆ ನೀರು ಒದಗಿಸಬೇಕು, ಕೃಷ್ಣ ಮತ್ತು ತುಂಗಭದ್ರಾ ನದಿಗಳಲ್ಲಿ ನೀರು ಕೂಡ ಬತ್ತಿ ಹೋಗಿವೆ, ಜಲದ ಮೂಲ ಕೂಡ ಬತ್ತಿ ಹೋಗಿವೆ ನದಿ ಪಾತ್ರದ ಜನರಿಗೆ ನೀರಿನ ಆಭಾವಗದಂತೆ ನೋಡಿಕೊಳ್ಳಬೇಕು,
ತಾಲೂಕು ಪಂಚಾಯತ್ *ವ್ಯಾಪ್ತಿಯಲ್ಲಿ ಸಹಾಯವಾಣಿ* ಪ್ರಾರಂಭಿಸಬೇಕು, ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಪಟ್ಟಿಯನ್ನು ಸಿದ್ಧಪಡಿಸಿ ತಾಲೂಕಿನ ಅಧಿಕಾರಿಗಳಿಗೆ ನೀಡಬೇಕು, ಆಯಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು, ಮೊದಲು ಕುಡಿಯುವ ನೀರು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು
ಅಸಿಸ್ಟೆಂಟ್ ಕಮಿಷನರ್ ಸುಭಾಷ್ ರವರು, ಎಂಪಿಎA ಅಧ್ಯಕ್ಷರು ಮಲ್ಲಿಕಾರ್ಜುನ ಗೌಡ , ಎಪಿಎಂಸಿ ಉಪಾಧ್ಯಕ್ಷ ಬಶೀರ್ ಅಹ್ಮದ್, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಚಂದ್ರಶೇಖರ, ತಾಲೂಕು ಮಟ್ಟದ ಅಧಿಕಾರಿಗಳು, ಉಪಸ್ಥಿತರಿದ್ದರು.

 

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";