ಬಸವ ಜಯಂತಿ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

Eshanya Times

ಕೊಪ್ಪಳ, ಮೇ ೧೦ :ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳಾದ ನಲೀನ್ ಅತುಲ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಅವರು ಹಾಗೂ ಇತರ ಗಣ್ಯರು ಸೇರಿ, ಬಸವಣ್ಣನವರು ಹಾಗೂ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷರಾದ ಪ್ರಭು ಹೇಬ್ಬಾಳ, ಮುಖಂಡರಾದ ಶರಣಪ್ಪ ವಕೀಲರು, ವಿರುಪಣ್ಣ ನವೋದಯ, ಹೇಮರೆಡ್ಡಿ ಕೇಂಚರೆಡ್ಡಿ, ಮನೋಹರ, ಶಿವರೆಡ್ಡಿ, ಶಂಕರಗೌಡ ಹಿರೇಗೌಡ್ರ, ಸುರೇಶ, ಸೇರಿದಂತೆ ಬಸವ ಸಮಾಜದ ಮುಖಂಡರು, ಯುವಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಪುತ್ಥಳಿಗೆ ಮಾಲಾರ್ಪಣೆ: ಬಸವ ಜಯಂತಿ ಪ್ರಯುಕ್ತ ನಗರದ ಹೊಸಪೇಟೆ ರಸ್ತೆಯಲ್ಲಿರುವ ಕಿಶೋರಿ ಪೆಟ್ರೋಲ್ ಬಂಕ್ ಹಿಂಭಾಗದ ನಗರಸಭೆಯ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನವನದಲ್ಲಿರುವ ಮಹನೀಯರ ಪುತ್ಥಳಿಗೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ ಮಹನೀಯರಿಗೆ ಗೌರವ ನಮನ ಸಲ್ಲಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಕೊಪ್ಪಳ ತಹಶೀಲ್ದಾರರಾದ ವಿಠಲ್ ಚೌಗಲ್, ತಾಲ್ಲೂಕ ಪಂಚಾಯತ್ ಇಓ ದುಂಡಪ್ಪ ತುರಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ ಕಣವಿ, ಸಮಾಜದ ಮುಖಂಡರಾದ ಬಸವರಾಜ ಬಳ್ಳೊಳ್ಳಿ ಹಾಗೂ ಇನ್ನೂ ಹಲವಾರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";