ಕಲಬುರಗಿ: ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ ಶ್ರೀನಿವಾಸ ಸರಡಿಯ ಕಲಬುರಗಿ ವಿಮಾನ ನಿಲ್ದಾಣಕ್ಕೆ ಕೆ.ಕೆ.ಆರ್.ಟಿ.ಸಿ. ಬಸ್ ಸೇವೆ ಆರಂಭಿಸಿದ್ದು, ಗುರುವಾರ ವಿಮಾನ ನಿಲ್ದಾಣದಲ್ಲಿ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಚೆನ್ನೈ ವಲಯದ ಜಂಟಿ ಜನರಲ್ ಮ್ಯಾನೇಜರ್ (ಕಾರ್ಯಚರಣೆ) ಶ್ರೀನಿವಾಸ ಪ್ರಸಾದ ಅವರು ಬಸ್ ಕಾರ್ಯಾಚರಣೆಗೆ ಚಾಲನೆ ನೀಡಿದರು.
ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನ ಸಮಯಕ್ಕೆ ಅನುಗುಣವಾಗಿ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ ನೇರವಾಗಿ ಬಸ್ ಸೇವೆ ಇರಲಿದ್ದು, ವಿಮಾನ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಈ ಸಂದರ್ಭದಲ್ಲಿ ಕಲಬುರಗಿ ವಿಮಾನ ನಿಲ್ದಾಣದ ಎ.ಎ.ಐ. ನಿರ್ದೇಶಕ ಮಹೇಶ ಚಿಲ್ಕಾ, ಕೆ.ಕೆ.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ವಿಭಾಗೀಯ ಸಂಚಾರ ಅಧಿಕಾರಿ ಈಶ್ವರ ಹೊಸಮನಿ ಇದ್ದರು.