ಜಿಲ್ಲೆಯಲ್ಲಿ ಶೇಕಡವಾರು ಮತದಾನ ಹೆಚ್ಚಳಕ್ಕೆ ವಿಶೇಷ ಕಾರ್ಯಕ್ರಮ : ಸಿಇಓ ರಾಹುಲ್ ಶರಣಪ್ಪ 

Eshanya Times

ಬಳ್ಳಾರಿ,ಮಾ.5:
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಿವಿಧ ಮತದಾನ ಜಾಗೃತಿ ಕಾರ್ಯಕ್ರಮಗಳ ಮುಖಾಂತರ ಜಿಲ್ಲೆಯ ಶೇಕಡವಾರು ಮತದಾನ ಹೆಚ್ಚಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿಯೂ ಆದ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಸ್ವೀಪ್ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆ ಸಂಬAಧಿಸಿದAತೆ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳಾದ ರೀಲ್ಸ್, ಕವಿಗೋಷ್ಠಿ, ರೋಸ್ ಡೇ, ಬೈಕ್ ರ‍್ಯಾಲಿ, ಸಾಹಿತ್ಯ ಸಮ್ಮೇಳನ, ಸೆಲ್ಪಿ ಬೂತ್, ಸುಗಮ ಸಂಗೀತ ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಕಳೆದ ಚುನಾವಣೆಯಲ್ಲಿ ಸಂಡೂರು ತಾಲ್ಲೂಕಿನ ಜಿಂದಾಲ್ ಕಾರ್ಖಾನೆಯಲ್ಲಿ ಕಡಿಮೆ ಮತದಾನ ಆಗಿದ್ದು, ಈ ಬಾರಿ ಕಾರ್ಮಿಕರಿಗೆ ಮತದಾನ ಅರಿವು ಮೂಡಿಸಿ ಹೆಚ್ಚಿನ ರೀತಿಯಲ್ಲಿ ಮತದಾನ ಚಲಾಯಿಸುವ ಕಾರ್ಯ ಮಾಡಬೇಕು ಎಂದರು.
ನಗರದಲ್ಲಿರುವ ಅಪಾರ್ಟ್ಮೆಂಟ್, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಪ್ಲೆಕ್ಸ್, ಎಲ್.ಇ.ಡಿ ವಿಡಿಯೋ ತುಣುಕು ಪ್ರದರ್ಶನ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಸಾಂಸ್ಕೃತಿಕ ಆಚರಣೆಯೊಂದಿಗೆ ಮತದಾನ ಕುರಿತು ಅರಿವು ಮೂಡಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಕೆ ಜಲಾಲಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗ್ರೇಸಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";