ರಾಯಚೂರು,ಮೇ.31:-
೦6-ರಾಯಚೂರು ಲೋಕಸಭಾ ಚುನಾವಣೆ ಸಾರ್ವತ್ರಿಕ ಚುನಾವಣೆ-೨೦೨೪ರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮತ ಎಣಿಕೆ ಪ್ರಕ್ರಿಯೆಯು ಜೂ.೪ರಂದು ನಡೆಯಲಿದ್ದು, ಮತ ಎಣಿಕೆಗೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ತಿಳಿಸಿದರು.
ಅವರು ಮೇ.೩೧ರ(ಶುಕ್ರವಾರ) ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಪ್ರಕ್ರಿಯೆಯು ಮೇ.೭ರಂದು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಈ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ನಗರದ ಎಸ್.ಆರ್.ಪಿ,ಎಸ್ ಹಾಗೂ ಎಲ್.ವಿಡಿ ಕಾಲೇಜಿನಲ್ಲಿ ಜೂ.೪ರಂದು ಜರುಗಲಿದೆ ಎಂದರು.
ಮತ ಎಣಿಕೆಗಾಗಿ ೧೫೯ ಮೇಲ್ವಿಚಾರಕರು, ೧೬೮ ಮೈಕ್ರೋ ಅಬ್ಸರ್ವರ್ ಹಾಗೂ ೧೫೯ ಮತ ಎಣಿಕೆ ಸಹಾಕಯರನ್ನು ನೇಮಕ ಮಾಡಲಾಗಿದೆ. ಜೂ.೪ರ ಬೆಳಿಗ್ಗೆ ೭ ಗಂಟೆಗೆ ಭದ್ರತಾ ಕೊಠಡಿಗಳನ್ನು ತೆರೆಯಲಾಗುವುದು ಬೆಳಿಗ್ಗೆ ೮:೦೦ ಗಂಟೆಗೆ ಅಂಚೆ ಮತ ಹಾಗೂ ಇವಿಎಂ ಮತಗಳ ಎಣಿಕೆ ಪ್ರಾರಂಭವಾಗುತ್ತವೆ ಎಂದು ತಿಳಿಸಿದರು.
೩೬-ಶೋರಾಪೂರ, ೩೭-ಶಹಪುರ, ೩೮-ಯಾದಗಿರಿ ಹಾಗೂ ೫೬-ದೇವದುರ್ಗ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಗಳನ್ನು ಎಲ್.ವಿ.ಡಿ ಕಾಲೇಜಿನಲ್ಲಿ ನಡೆಸಲಾಗುವುದು ಉಳಿದಂತೆ ೫೩-ರಾಯಚೂರು ಗ್ರಾಮೀಣ, ೫೪- ರಾಯಚೂರು ನಗರ, ೫೫- ಮಾನವಿ ಮತ್ತು ೫೭-ಲಿಂಗಸಗೂರು ವಿಧಾನಸಭಾ ಕ್ಷೇತ್ರದ ಮತಗಳನ್ನು ಎಸ್.ಆರ್.ಪಿ.ಎಸ್ ಕಾಲೇಜಿನಲ್ಲಿ ಎಣಿಕೆ ಮಾಡಲಾಗುವುದು ಎಂದರು.
ಮತ ಎಣಿಕೆ ಕೋಣೆಗೆ ಮತ ಎಣಿಕೆ ಮೇಲ್ವಿಚಾರಕರು, ಮತ ಎಣಿಕೆ ಸಹಾಯಕರು, ಸೂಕ್ಷö್ಮ ವೀಕ್ಷಕರು, ಚುನಾವಣೆ ಆಯೋಗವು ಸೂಚಿಸಿರುವ ಅಧಿಕೃತ ವ್ಯಕ್ತಿಗಳು, ಚುನಾವಣೆಗೆ ಸಂಬAಧಿಸಿದ ಕರ್ತವ್ಯದ ಮೇಲಿರುವ ಸರ್ಕಾರಿ ನೌಕರರು, ಅಭ್ಯರ್ಥಿಗಳು, ಅವರ ಚುನಾವಣಾ ಏಜೆಂಟರುಗಳು ಮತ್ತು ಮತ ಎಣಿಕೆ ಏಜೆಂಟರುಗಳಿಗೆ ಮಾತ್ರ ಅನುಮತಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.