ರಾಯಚೂರು: ಮೇ-21:
ನಗರದಲ್ಲಿನ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರ ಕಾರ್ಯಾಲಯದಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಚುನವಾಣೆ ಹಿನ್ನೆಲೆಯಲ್ಲಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಅರವರನ್ನು ಅತೀ ಹೆಚ್ಚಿನ ಮತಗಳ ಅಂತರದಿAದ ಗೆಲ್ಲಿಸಿಬೇಕು, ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಯನ್ನು ಅತೀ ಹೆಚ್ಚಿನ ಮತ ನೀಡಿ ಗೆಲ್ಲಿಸಿ ಕೊಡಬೇಕು, ವಿಶೇಷವಾಗಿ ರಾಯಚೂರು ಗ್ರಾಮೀಣ ಕ್ಷೇತ್ರದ ಪದವಿದಾರ ಮತದಾರರು ಈ ಬಾರಿ ಗ್ರಾಮೀಣ ಕ್ಷೇತ್ರದಲ್ಲಿ ಚಂದ್ರಶೇಖರ ಪಾಟೀಲ ರವರಿಗೆ ಆರ್ಶಿವಾದ ಮಾಡಬೇಕು ಎಂದು ಮನವಿ ಮಾಡಿ ಮತಯಾಚನೆ ಮಾಡಿದರು, ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.