ಕಲಬುರಗಿ,ಸೆ.೨: ಇದೇ ಸೆಪ್ಟೆಂಬರ್ ೧೫ ರಂದು ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಬೀದರದಿಂದ ಚಾಮರಾಜನಗರ ವರೆಗೂ ರಾಜ್ಯದಾದ್ಯಂತ ಏಕಕಾಲಕ್ಕೆ ಮಾನವ ಸರಪಳಿ ನಿರ್ಮಸಲಾಗುತ್ತಿದ್ದು, ಅದರಂತೆ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.
ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಸೆ.೧೫ ರಂದು ಕಲಬುರಗಿ ಜಿಲ್ಲೆಯಲ್ಲಿ ಏಕಕಾಲಕ್ಕೆ ೧೧೩ ಕಿ.ಮೀ. ಉದ್ದ ಮಾನವ ಸರಪಳಿ ನಿರ್ಮಿðಸಲಾಗುತ್ತಿದೆ ಎಂದರು.
ಜಿಲ್ಲೆಯಾದ್ಯAತ ೧೧೩ ಕಿ.ಮೀ. ಉದ್ದದ ಮಾನವ ಸರಪಳಿಯಲ್ಲಿ ಪ್ರತಿಯೊಂದು ಕಿ.ಮೀ. ಅಂತರದಲ್ಲಿ ಸುಮಾರು ೮೦೦ ಜನರನ್ನು ಬೆಳಿಗ್ಗೆ ೮.೩೦ ಗಂಟೆಗೆ ಸೇರಿಸಬೇಕು. ೮.೪೫ ಗಂಟೆಗೆೆ ಎಲ್ಲವು ಸಜ್ಜುಗೊಂಡು ಸರಿಯಾಗಿ ೯ ಗಂಟೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವ ಮಹತ್ವ ಸಾರಲಾಗುತ್ತದೆ. ತದನಂತರ ೯.೧೫ ಗಂಟೆಗೆ ಸಂವಿಧಾನ ಪೀಠಿಕೆ ವಾಚನ, ೯.೩೦ ಗಂಟೆಗೆ ಕೊನೆಯದಾಗಿ ಜಯ ಹಿಂದ್-ಜಯ್ ಕರ್ನಾಟಕ ಘೋಷಣೆಯೊಂದಿಗೆ ಕಾರ್ಯಕ್ರಮ ವಿರಾಮ ಪಡೆಯಲಿದೆ ಎಂದರು.
ಜಿಲ್ಲೆಯ ಕಮಲಾಪುರ ತಾಲೂಕಿನ ಕಿಣ್ಣಿಸಡಕ್‌ದಿಂದ ಯಾದಗಿರಿ ಗಡಿಗೆ ಹೊಂದಿಕೊAಡ ಅಲ್ಲಿಪೂರ ತಾಂಡಾ ವರೆಗೆ ೧೧೩ ಕಿ.ಮೀ. ಉದ್ದಕ್ಕೂ ಪ್ರತಿ ಕಿ.ಮೀ. ಅಂತರದಲ್ಲಿ ಮಾನವ ಸರಪಳಿ ರಚನೆಗೆ ಬರುವ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳಾ ಸ್ವ-ಸಂಘದ ಸದಸ್ಯರು, ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಾಹನದ ವ್ಯವಸ್ಥೆ ಮಾಡಬೇಕು ಎಂದರು.
ಬೀದರ ಜಿಲ್ಲೆಯ ಗಡಿಯಾಗಿರುವ ಕಮಲಾಪೂರ ತಾಲೂಕಿನ ಕಿಣ್ಣಿಸಡಕ್‌ನಿಂದ ಕಮಲಾಪೂರ-ಕಲಬುರಗಿ-ಶಹಾಬಾದ-ವಾಡಿ-ನಾಲವಾರ ಮಾರ್ಗವಾಗಿ ಅಲ್ಲಿಪೂರ ತಾಂಡಾ ವರೆಗೆ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಆಯಾ ತಾಲೂಕಿನ ತಹಶೀಲ್ದಾರರು, ತಾಲೂಕಾ ಪಂಚಾಯತ್ ಇ.ಓ., ಪಿ.ಡಿ.ಓ. ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಕಾರ್ಯಕ್ರಮ ಯಶಸ್ಸಿಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ರಸ್ತೆ ಮೇಲೆ ಮಾನವ ಸರಪಳಿ ರಚನೆ ಮಾಡುತ್ತಿರುವುದರಿಂದ ಪೊಲೀಸರು ವಾಹನಗಳ ಸಂಚಾರಕ್ಕೆ ತೊಂದರೆಯಾಗದAತೆ ಎಚ್ಚರಿಕೆ ವಹಿಸಬೇಕೆಂದರು.
ಸಭೆಯಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಅಯುಕ್ತೆ ರೂಪಿಂದರ್ ಸಿಂಗ್ ಕೌರ್, ಎ.ಸಿ.ಪಿ. ಬಿಂದುರಾಣಿ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಮೀನಾಕ್ಷಿ ಆರ್ಯ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಅಲ್ಲಾಬಕ್ಷ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.