ಬೀದರ, ಆಗಸ್ಟ್. 12 : ಹರ್ ಘರ್ ತಿರಂಗಾ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ ೧೪ರಂದು ಬೀದರ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇವುಗಳನ್ನು ಯಶ್ವಸಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ಶ್ರೀಮತಿ ಶಿಲ್ಪಾ ಶರ್ಮಾ ಅವರು ಹೇಳಿದರು.
ಅವರು ಸೊಮವಾರ ಬೀದರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಮಾಧ್ಯಮ ಪತ್ರಿನಿಧಿಗಳಿಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಸಾರ್ವಜನಿಕರು ಮತ್ತು ತಮ್ಮ ನೆರೆ-ಹೊರೆಯವರು ಕೂಡ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸಿ ಆ.೧೩ ರಿಂದ ೧೫ ರ ವರೆಗೆ ತಮ್ಮ ಮನೆಗಳ ಮೇಲೆ ಸ್ವಯಂ ಪ್ರೇರಿತರಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಹರ್ ಘರ್ ತಿರಂಗಾ ಅಭಿಯಾನ ನಿಮಿತ್ತ ಆ ೧೪ರಂದು ಬೆಳಿಗ್ಗೆ ೭ ಗಂಟೆಗೆ ಬೀದರ ಕೋಟೆಯಿಂದ ಮಹ್ಮದ ಗವಾನ ಚೌಕ್, ಡಾ|| ಬಿ.ಆರ್ ಅಂಬೇಡ್ಕರ ವೃತ್ತ, ಶಿವಾಜಿ ವೃತ, ಹರಳಯ್ಯ ವೃತಗಳ ಮಾರ್ಗವಾಗಿ ನೆಹರು ಕ್ರೀಡಾಂಗಣದ ವರೆಗೆ ಹರ್ ಘರ್ ತಿರಂಗಾ-೨೦೨೪ ಕುರಿತು ಪ್ರತಿಜ್ಞಾ ವಿಧಿ ಭೋದನೆಯೊಂದಿಗೆ ತಿರಂಗಾ ಯಾತ್ರೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಆ.೧೪ ರಂದು ಬೆಳಿಗ್ಗೆ ೮ ಗಂಟೆಗೆ ಶ್ರೀ ಸಿದ್ಧಾರೂಢ ಮಠದಿಂದ ಮೈಲೂರು ಕ್ರಾಸ್, ಕನಕದಾಸ ವೃತ, ರೈಲ್ವೆ ಆಂಡರ್ ಬ್ರೀಡ್ಜ, ಭಗತ್ ಸಿಗ್ ವೃತ, ಡಾ|| ಬಿ.ಆರ್ ಅಂಬೇಡ್ಕರ ವೃತ್ತ, ಜನರಲ್ ಕರಿಯಪ್ಪಾ ವೃತಗಳ ಮಾರ್ಗವಾಗಿ ನೆಹರು ಕ್ರೀಡಾಂಗಣದ ವರೆಗೆ ಹರ್ ಘರ್ ತಿರಂಗಾ-೨೦೨೪ ಕುರಿತು ಪ್ರತಿಜ್ಞಾ ವಿಧಿ ಭೋದನೆಯೊಂದಿಗೆ ಬೈಕ್ ರ‍್ಯಾಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಆ.೧೪ ರಂದು ಬೆಳಿಗ್ಗೆ ೮ ಗಂಟೆಗೆ ಬರೀದ್ ಶಾಹಿ ಉದ್ಯಾನ ವನದಿಂದ ಕೇಂದ್ರ ಬಸ್ ನಿಲ್ದಾಣ, ಮಡಿವಾಳ ವೃತ್ತ, ಕನ್ನಡಾಂಬೆ ವೃತದ ಮಾರ್ಗವಾಗಿ ನೆಹರು ಕ್ರೀಡಾಂಗಣದ ವರೆಗೆ ಹರ್ ಘರ್ ತಿರಂಗಾ-೨೦೨೪ ಕುರಿತು ಪ್ರತಿಜ್ಞಾ ವಿಧಿ ಭೋದನೆಯೊಂದಿಗೆ ತಿರಾಂಗ ಓಟ ನಡೆಯುವುದು. ಆ.೧೪ ರಂದು ಹರ್ ಘರ್ ತಿರಂಗಾ ಅಭಿಯಾನ ಕುರಿತು ಕ್ಯಾನ್ವಾಸ್‌ನಲ್ಲಿ ಹರಘರ್ ತಿರಂಗ ಮತ್ತು ಜೈ ಹಿಂದ್ ಅನ್ನು ಯಾವುದೇ ಭಾರತೀಯ ಭಾಷೆಯಲ್ಲಿ ಬರೆಯಬಹುದು ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸಿದ ಸಾರ್ವಜನಿಕರು ಜಿಲ್ಲಾ ನೆಹರು ಕ್ರೀಡಾಂಗಣದ ಸೆಲ್ಫಿ ಪಾಯಿಂಟ್‌ನಲ್ಲಿ ಸೆಲ್ಫಿ ತೆಗೆದುಕೊಂಡು ತಮ್ಮ ಸೆಲ್ಫಿಗಳನ್ನು https://hargartiranga.com ನಲ್ಲಿ ಹಂಚಿಕೊಳ್ಳಬಹುದು ಎಂದು ಹೇಳಿದರು.
ಆ.೧೪ರಂದು ಹರ್ ಘರ್ ತಿರಂಗಾ ಅಭಿಯಾನ ಕುರಿತು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ತಿರಂಗಾ ಮೇಳಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದ ಅವರು, ಸ್ವಾತಂತ್ರ ದಿನಾಚರಣೆದಂದು ಸಾಯಂಕಾಲ ೬ ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಹರ್ ಘರ್ ತಿರಂಗಾ-೨೦೨೪ರ ಕುರಿತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಹಾಗೂ ವಿವಿಧ ಸಂಘ-ಸAಸ್ಥೆಗಳು ಮತ್ತು ಶಾಲಾ-ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗಿರೀಶ್ ಬದೋಲೆ, ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ ಅವರು ಭಾಗವಹಿಸಿದರು.
ಹರ್ ಘರ್ ತಿರಂಗಾ ಕಾರ್ಯಕ್ರಮ ಯಶ್ವಸಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
WhatsApp Group
Join Now