ಬೀದರ, ಸೆಪ್ಟೆಂಬರ್.೦4:ಸೆಪ್ಟೆಂಬರ್. ೧೫ ರಂದು ನಡೆಯಲಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯಶಸ್ವಿಗೆ ಬೀದರ ಜಿಲ್ಲೆಯ ವಿವಿಧ ಸಂಘ-ಸAಸ್ಥೆಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿವಿಧ ಸಂಘ-ಸAಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು. ವಿವಿಧ ಸಮಾಜದ ಮುಖಂಡರಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ದಿನದಂದು ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು. ನಮ್ಮ ಬೀದರ ಜಿಲ್ಲೆಯ ಬಸವಕಲ್ಯಾಣದ ಅನುಭವ ಮಂಟಪದಿAದ ಆರಂಭಿಸಲಾಗುತ್ತಿರುವುದು ವಿಶೇಷವಾಗಿದ್ದು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರು ಸೇರಬೇಕಾಗಿರುವುದರಿಂದ ಇದರ ಯಶಸ್ವಿಗೆ ಜಿಲ್ಲೆಯ ಜನರು ನಮಗೆ ಸಹಕಾರ ನೀಡಬೇಕೆಂದು ಹೇಳಿದರು.
೪೦ ಸಾವಿರಕ್ಕಿಂತ ಹೆಚ್ಚಿನ ಜನರು ಸೇರಬೇಕಿದೆ. ಈ ಕಾರ್ಯಕ್ರಮ ಆರಂಭದ ಸ್ಥಳ ಅನುಭವ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಸುವದರ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅಂದು ಬೆಳಿಗ್ಗೆ ನಡೆಯಲಿವೆ. ಜಿಲ್ಲೆಯ ಹೆಚ್ಚಿನ ಜನರು ಇದರಲ್ಲಿ ಭಾಗವಹಿಸಬೇಕೆಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿ ಸರ್ಕಾರದ ನಿರ್ದೇಶನದಂತೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸೆಪ್ಟೆಂಬರ್. ೧೫ ರಂದು ಬೆಳಿಗ್ಗೆ ೮:೩೦ ರಿಂದ ೯:೩೦ ರವರೆಗೆ ನಡೆಸಲಾಗುತ್ತಿದೆ. ಅನುಭವ ಮಂಟಪದಿAದ ಹಳ್ಳಿಖೇಡ. ಕೆ ವರೆಗೆ ೪೫ ಕಿ. ಮೀ ದೂರ ಆಗಲಿದೆ. ಶಾಲಾ- ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ೩೦ ಸಾವಿರ ಮಕ್ಕಳು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ೧೦ ಸಾವಿರ ಒಟ್ಟು ೩೦ ಸಾವಿರ ಮಕ್ಕಳು ಸೇರಲಿದ್ದಾರೆ. ವಿಶೇಷವಾಗಿ ಬಸವಕಲ್ಯಾಣ ಹಾಗೂ ಹುಮನಾಬಾದ ತಾಲ್ಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ವ್ಯವಸ್ಥೆ ಮಾಡಲಾಗುವುದು.
ಪ್ರತಿ ನೂರು ಮೀಟರ ನಲ್ಲಿರುವ ಮಕ್ಕಳನ್ನು ನೋಡಿಕೊಳ್ಳಲು ಒಬ್ಬ ಅಧಿಕಾರಿಯನ್ನು ನಿಯೋಜನೆ ಮಾಡಲಾಗುತ್ತದೆ. ಮಾನವ ಸರಪಳಿ ಸೇರುವ ಮಾರ್ಗದಲ್ಲಿ ಬರುವ ಶಾಲಾ- ಕಾಲೇಜುಗಳ ಮಕ್ಕಳು ಹಾಗೂ ಗ್ರಾಮ ಪಂಚಾಯತಿ ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲು ತಿಳಿಸಲಾಗಿದೆ ಎಂದು ಹೇಳಿದರು.
ಈ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಸಿಂಧು ಎಚ್.ಎಸ್. ಮಾರುತಿ ಬೌದ್ಧೆ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ರಾಜೇಂದ್ರಕುಮಾರ ಗಂಧಗೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ವಿಜಯಕುಮಾರ ಸೋನಾರೆ, ತುಕಾರಾಂ ಚಿಮಕೋಡ, ಸಂತೋಷ ಜೋಳದಪಕಾ, ಎಂ.ಎಸ್. ಮನೋಹರ, ಪಾರ್ವತಿ ಸೋನಾರೆ, ಭಾರತಿ ವಸ್ತ್ರದ, ರಮೇಶ ಕಟ್ಟಿತುಗಾಂ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳ ಹಾಗೂ ಸಮಾಜದ ಮುಖಂಡರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು.