ರಾಯಚೂರು: ಸವಿತಾ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಿರುವುದು ಉತ್ತಮ ಕಾರ್ಯವಾಗಿದ್ದು, ಸಮಾಜದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಸಮಾಜಕ್ಕೆ ಕೀರ್ತಿ ತರುವ ಕೆಲಸ ಮಾಡಬೇಕೆಂದು ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದರು.
ನಗರದ ಕನ್ನಡ ಭವನದಲ್ಲಿ ಜಿಲ್ಲಾ ಸವಿತಾ ಸಮಾಜ ನೌಕರರ ಸಂಘದ ವತಿಯಿಂದ ಆಯೋಜಿಸಿದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ೯ನೇ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸವಿತಾ ಸಮಾಜವು ಅತಿ ಚಿಕ್ಕ ಸಮಾಜವಾಗಿದ್ದರೂ ಸಮಾಜದ ಕೆಲಸ ಮಾತ್ರ ಅತ್ಯಂತ ಶ್ರೇಷ್ಠವಾಗಿದೆ. ಸಮಾಜದ ವೃತ್ತಿಯನ್ನು ಮುಂದುವರೆಸಿಕೊAಡು ಹೋಗುತ್ತಿದ್ದು, ಇದನ್ನು ಕೀಳಾಗಿ ಭಾವಿಸದೇ ತಮ್ಮ ವೃತ್ತಿಯೇ ಶ್ರೇಷ್ಠವಾಗಿದೆ ಎಂದರು.
ಆಧುನಿಕ ಯುಗದಲ್ಲಿ ಕ್ಷೌರಿಕ ವೃತ್ತಿಯು ಲಾಭದಾಯಕ ವೃತ್ತಿಯಾಗಿದ್ದು,ಹೆಚ್ಚಿನ ವಿದ್ಯಾಭ್ಯಾಸ ಮಾಡಿದರು. ಸಹ ಈ ವೃತ್ತಿಯಲ್ಲಿ ತೊಡಗಿ ಬ್ಯೂಟಿ ಪಾರ್ಲರ್ಗಳನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆಂದರು.
ಸವಿತಾ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸುತ್ತಿರುವುದು ಇದು ಮತ್ತಷ್ಟು ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಿದಂತೆ ಆಗಲಿದ್ದು, ಇನ್ನೂ ಶಿಕ್ಷಣದಲ್ಲಿ ಹೆಚ್ಚಿನ ಸಾಧನೆ ಮಾಡಲಿ ಎಂದು ಆಶಿಸಿದರು.
ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ,ಪಿಯುಸಿ,ಪದವಿ,ಸ್ನಾತಕೋತ್ತರ ಪದವಿ ಸೇರಿದಂತೆ ಇತರೆ ವಿದ್ಯಾರ್ಥಿಗಲಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿದರು.
ವೇದಿಕೆ ಮೇಲೆ ನಗರಸಭೆ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಶಾಂತಪ್ಪ, ಜಿಲ್ಲಾ ಸವಿತಾ ಸಮಾಜದ ನೌಕರರ ಸಂಘದ ಅಧ್ಯಕ್ಷ ಆರ್. ನಾಗರಾಜ, ಸ್ವಾಮಿ ವಿವೇಕಾನಂದ ಗ್ರೂಪ್ ಆಫ್ ಇನ್ಸಿ÷್ಟಟ್ಯೂಟ್ನ ಅಧ್ಯಕ್ಷ ಡಾ.ವಿಷ್ಣು ಕುಮಾರ್,ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ವಿಜಯ ಭಾಸ್ಕರ್ ಇಟಗಿ,ಎಸ್ಆರ್ಎಸ್ ಮಹಿಳಾ ಮಹಾವಿದ್ಯಾಲಯ ನಿವೃತ್ತ ಪ್ರಚಾರ್ಯ ಸತ್ಯನಾರಾಯಣ, ನಗರಸಭೆ ಸದಸ್ಯ ವಲ್ಲೂರು ವೆಂಕಟೇಶ, ಸವಿತಾ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ಗಾಯತ್ರಿ ಚಂದಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು- ಡಾ.ಶಿವರಾಜ ಪಾಟೀಲ್
WhatsApp Group
Join Now