ಸಿರುಗುಪ್ಪ.ಜು.೦೯:- ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಿನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ತೆಕ್ಕಲಕೋಟೆ ಪೊಲೀಸರುದಾಳಿ ಮಾಡಿ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡ ಘಟನೆ ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ತೆಕ್ಕಲಕೋಟೆ ಪೊಲೀಸ್ ಠಾಣೆಯ ಪಿ ಎಸ್ ಐ ಶಾಂತಮೂರ್ತಿ ನೇತೃತ್ವದ ತಂಡ ದಾಳಿ ನಡೆಸಿ ರೂ೪೫ ಸಾವಿರ ಮೌಲ್ಯದ ೪೦ ಚೀಲದಲ್ಲಿದ್ದ ೧೫ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಒಯ್ಯುತ್ತಿದ್ದ ಆಶೋಕ್ ಲೇಲ್ಯಾಂಡ್ ಆಟೋವನ್ನು ದೇವಿನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಪೊಲೀಸರು ಅಡ್ಡಗಟ್ಟಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಕ್ಕಿಯನ್ನು ಮತ್ತು ಆಟೋವನ್ನು ವಶಪಡಿಸಿಕೊಂಡಿದ್ದಾರೆ, ಆಟೋ ಚಾಲಕ ಪರಾರಿಯಾಗಿದ್ದಾನೆ, ಈ ಬಗ್ಗೆ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂದರ್ಭದಲ್ಲಿ ಸಿರುಗುಪ್ಪ ಆಹಾರ ನಿರೀಕ್ಷಕ ಮಹಾರುದ್ರಗೌಡ ಹಾಜರಿದ್ದರು.