ಬೀದರ್‌: 1.50 ಲಕ್ಷ ರೈತರಿಗೆ ಬರ ಪರಿಹಾರ

Eshanya Times
WhatsApp Group Join Now
ಬೀದರ. ಮೇ.16 : ಬರಗಾಲದಿಂದ ತತ್ತರಿಸಿರುವ ರೈತರಿಗೆ ಬರ ಪರಿಹಾರದ ಮೊತ್ತ ಜಮೆ ಮಾಡುವ ಪ್ರಕ್ರಿಯೆ ಜಿಲ್ಲೆಯಲ್ಲಿ ಚುರುಕಿನಿಂದ ನಡೆದಿದೆ.
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಶೇಕಡಾ ತಲಾ 50ರ ಅನುಪಾತದಲ್ಲಿ ಜಿಲ್ಲೆಗೆ ಒಟ್ಟು ₹117.75 ಕೋಟಿ ಪರಿಹಾರ ಮೊತ್ತ ಬಿಡುಗಡೆಯಾಗಿದೆ.
ಮಾರ್ಗಸೂಚಿ ಪ್ರಕಾರ, ಪ್ರತಿ ಹೆಕ್ಟೇರ್‌ಗೆ ₹8,600 ಪರಿಹಾರ ನಿಗದಿಪಡಿಸಲಾಗಿದೆ. ಇದರ ಅನ್ವಯ, ಮೊದಲ ಹಂತದಲ್ಲಿ ಪ್ರತಿ ಹೆಕ್ಟೇರ್‌ಗೆ ನಿಗದಿಪಡಿಸಿರುವ ₹8,600ರಲ್ಲಿ ₹2 ಸಾವಿರ ರೈತರ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ. ಇನ್ನುಳಿದ ₹6,600 ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.
ಬ್ಯಾಂಕ್‌ ಖಾತೆಗಳೊಂದಿಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡದೇ ಇರುವುದು ಮತ್ತು ಹೆಸರುಗಳು ತಾಳೆಯಾಗದ ಕಾರಣ ಇನ್ನೂ ಜಿಲ್ಲೆಯ 11,075 ರೈತರಿಗೆ ಪರಿಹಾರ ಸೇರಬೇಕಿದೆ. ಈಗಾಗಲೇ ಜಿಲ್ಲೆಯ 1.50 ಲಕ್ಷ ರೈತರಿಗೆ ಪರಿಹಾರ ವಿತರಿಸಲಾಗಿದೆ.
ಜಿಲ್ಲೆಯ ಒಟ್ಟು 11,075 ರೈತರ ಬ್ಯಾಂಕ್‌ ಖಾತೆಗಳಿಗೆ ವಿವಿಧ ಕಾರಣಗಳಿಂದ ಪರಿಹಾರ ಮೊತ್ತ ಜಮೆಯಾಗಿಲ್ಲ. ಇಂತಹ ರೈತರ ಪಟ್ಟಿ ಸಿದ್ಧಪಡಿಸಲಾಗಿದೆ. ಯಾರ ಬ್ಯಾಂಕ್‌ ಖಾತೆಗಳೊಂದಿಗೆ ಆಧಾರ್‌ ಸಂಖ್ಯೆ ಜೋಡಿಸಿಲ್ಲ. ಅವರು ಬ್ಯಾಂಕುಗಳಿಗೆ ಭೇಟಿ ಕೊಟ್ಟು ಪ್ರಕ್ರಿಯೆ ಮುಗಿಸಬೇಕು. ‘ಫ್ರೂಟ್ಸ್‌’ ತಂತ್ರಾಂಶದಲ್ಲಿ ಹೆಸರು ತಾಳಯಾಗದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ಕೊಟ್ಟು ಸರಿಪಡಿಸಿಕೊಳ್ಳಲು ತಿಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.
ಬರದಿಂದ ಉದ್ದು, ಹೆಸರು, ಸೋಯಾಬೀನ್‌ ಹಾಗೂ ತೊಗರಿ ಬೆಳೆಗಳು ಜಿಲ್ಲೆಯಲ್ಲಿ ಹಾಳಾಗಿದ್ದವು. ಈಗಾಗಲೇ ಮೊದಲನೆ ಕಂತಿನಲ್ಲಿ ಗರಿಷ್ಠ ₹2 ಸಾವಿರ ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ. ಎಸ್.ಡಿ.ಆರ್.ಎಫ್/ಎನ್‌.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಆಯಾ ಬೆಳೆಗಳಿಗೆ ನಿಗದಿಪಡಿಸಿದ ಪ್ರಕಾರ ಪರಿಹಾರ ಧನ ಜಮೆ ಮಾಡಲಾಗುತ್ತಿದೆ. ಒಂದು ವೇಳೆ ಯಾರಿಗಾದರೂ ಪರಿಹಾರ ಜಮೆಯಾಗದೇ ಇದ್ದಲ್ಲಿ ರೈತರು ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಥವಾ ತಹಶೀಲ್ದಾರ್‌ ಕಚೇರಿಯಲ್ಲಿರುವ ಪ್ರಕೃತಿ ವಿಕೋಪ ಶಾಖೆಗೆ ಭೇಟಿ ನೀಡಿ ಪರಿಹಾರ ಪಡೆದುಕೊಳ್ಳಬಹುದು’ ಎಂದು ತಿಳಿಸಿದ್ದಾರೆ.
ಗೋವಿಂದ ರೆಡ್ಡಿ ಜಿಲ್ಲಾಧಿಕಾರಿ ಬೀದರ್‌ಬೀದರ್‌ ಜಿಲ್ಲೆಯ ರೈತರಿಗೆ ಮೊದಲ ಕಂತಿನಲ್ಲಿ ₹2 ಸಾವಿರ ಎರಡನೇ ಕಂತಿನಲ್ಲಿ ₹6600 ಪರಿಹಾರ ಅವರ ಖಾತೆಗೆ ಜಮೆ ಮಾಡಲಾಗಿದೆ. ಬೀದರ್‌ ಜಿಲ್ಲೆಯಾದ್ಯಂತ ಮೇ ತಿಂಗಳಲ್ಲಿ ಮಳೆಯಾಗುತ್ತಿರುವುದರಿಂದ ಅನ್ನದಾತರಲ್ಲಿ ಭರವಸೆ ಮೂಡಿದೆ. ಹಿಂದಿನ ವರ್ಷ ಸಕಾಲಕ್ಕೆ ಮಳೆಯಾಗಿತ್ತು. ಆದರೆ ಆನಂತರದ ದಿನಗಳಲ್ಲಿ ಮಳೆ ಕೈಕೊಟ್ಟಿತು. ಇದರ ಪರಿಣಾಮ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಈ ಸಲ ಹಿಂದಿನಂತೆ ಆಗದಿರಲಿ ಎಂದು ರೈತರು ಪ್ರಾರ್ಥಿಸುತ್ತಿದ್ದಾರೆ. ಈಗಾಗಲೇ ಜಿಲ್ಲೆಯ ಹಲವೆಡೆ ಜಮೀನು ಹದ ಮಾಡಿಕೊಳ್ಳಲಾಗುತ್ತಿದೆ. ಹೊಸ ಭರವಸೆಯೊಂದಿಗೆ ರೈತರು ಮುಂಗಾರಿಗೆ ಸಿದ್ಧತೆ ಮಾಡುತ್ತಿದ್ದಾರೆ. ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮಂಗಳವಾರ ತಡರಾತ್ರಿಯಿಂದ ನಸುಕಿನ ಜಾವದವರೆಗೆ ಉತ್ತಮ ಮಳೆಯಾಗಿದೆ.ಮಳೆ ಮೂಡಿಸಿದ ಭರವಸೆ ₹117.75 ಕೋಟಿ ಬೀದರ್‌ ಜಿಲ್ಲೆಗೆ ಬಿಡುಗಡೆಯಾದ ಒಟ್ಟು ಪರಿಹಾರ 1.50 ಲಕ್ಷ ರೈತರಿಗೆ ಪರಿಹಾರ ನೀಡಿಕೆ 11075 ರೈತರಿಗೆ ತಾಂತ್ರಿಕ ಕಾರಣದಿಂದ ವಿಳಂಬ.
WhatsApp Group Join Now
Telegram Group Join Now
Share This Article

Eshanya Times, Regional Kannada Daily is a leading news paper in Kalyana Karnataka (North Karnataka). Which is having large number of circulation in the districts of Raichur, Koppla, Bellary, Yadgir, Gulbarga, Bidar, Vijayanagara, Bagalkote and in the capital city of Bangalore.

This News Paper having Registred Office in Raichur City, Karnataka State.

The main mooto of the Eshanya Times news paper is to serve the nation and to give wide publicity of Government Developmental programmes and policies which are execuited in Government and also to give social justice to the people of Karnataka.

Copyright © 2024. Eshanya Times.  All Rights Reserved,

Powered By KhushiHost
24/7 Help Desk Support – Call Now +919060329333 

error: Content is protected !!