ರಾಯಚೂರು: ಮೇ-೩: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಭಂದಿಸಿದಂತೆ ದೇಶ ಬಿಟ್ಟು ಓಡಿ ಹೋಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಮಹಿಳೆಯರು ಪೊರಕೆ ಹಿಡಿದು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಪ್ರಜ್ವಲ್ ರೇವಣ್ಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ತಕ್ಷಣ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಮಹಿಳೆಯರ ರಕ್ಷಣೆ ಪರವಾಗಿ ಮಾತನಾಡುವ ಪ್ರಧಾನಿ ಮೋದಿ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡದೇ ಮೌನಕ್ಕೆ ಶರಣಾಗಿರುವುದನ್ನು ಖಂಡಿಸಿ ಘೋಷಣೆ ಕೂಗಲಾಯಿತು.
ಪ್ರಜ್ವಲ್ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು, ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಓಡಿ ಹೋಗಿದ್ದು, ಭಾರತಕ್ಕೆ ವಾಪಸ್ ಕರೆಯಿಸಿದ ತಕ್ಷಣ ಬಂಧಿಸಬೇಕೆAದು ಒತ್ತಾಯಿಸಲಾಯಿತು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ದ ಹೋರಾಟಕ್ಕೆ ಮುಂದಾಗದೇ ಮೌನವಹಿಸಿರುವುದನ್ನು ಖಂಡಿಸಿದರು.
ಈ ಘಟನೆ ತನಿಖೆಗೆ ರಾಜ್ಯ ಸರಕಾರ ಎಸ್‌ಐಟಿಗೆ ನೀಡಿದ್ದು, ತನಿಖೆ ಮುಂದುವರೆದಿದ್ದು, ಕೂಡಲೇ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಶ್ರೀದೇವಿ ನಾಯಕ, ಕೆಪಿಸಿಸಿ ಕಾರ್ಯದರ್ಶಿ ಶಶಿಕಲಾ ಬೀಮರಾಯ್,ರಾಣಿರಿರ್ಚ್ಡ್, ನವನೀತ, ಮಂಜುಳ ಅಮರೇಶ,ಪಲ್ಲವಿ, ಪದ್ಮಾವತಿ, ರಾಜೇಶ್ವರಿ ಸೇರಿದಂತೆ ಅನೇಕ ಮಹಿಳೆಯರು ಭಾಗವಹಿಸಿದ್ದರು.