ಸುರಪುರ: ಇಲ್ಲಿಯ ನಗರಸಭೆಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರ ಸಮ್ಮುಖದಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಸಲಾಗಿದೆ.ಅಧ್ಯಕ್ಷರಾದ ಹೀನಾ ಕೌಸರ್ ಹಾಗೂ ಉಪಾಧ್ಯಕ್ಷರಾದ ರಾಜಾ ಪಿಡ್ಡ ನಾಯಕ (ತಾತಾ) ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಶಾಸಕ ರಾಜಾ ವೇಣುಗೋಪಾಲ ನಾಯಕ ಶುಭ ಹಾರೈಸಿ ಮಾತನಾಡಿದರು.ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ ಸೇರಿದಂತೆ ಎಲ್ಲಾ ಸದಸ್ಯರು,ನಯೋಪ್ರಾ ಅಧ್ಯಕ್ಷ ಪ್ರಕಾಶ ಗುತ್ತೇದಾರ,ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.