ರಾಯಚೂರು,ಜೂ.03:
ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ರ ಹಿನ್ನಲೆ ಜೂ.೪ರಂದು ಮತ ಎಣಿಕೆ ಪ್ರಕ್ರಿಯೆ ಜರುಗಲಿದ್ದು, ಜೂ.೩ರಂದು ಚುನಾವಣಾ ಸಾಮಾನ್ಯ ವೀಕ್ಷಕ ಅಜಯ್ ಪ್ರಕಾಶ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಅವರು ಅಂತಿಮ ಸಿದ್ದತೆಗಳ ಕುರಿತು ಪರಿಶೀಲನೆ ನಡೆಸಿದರು.
ನಗರದ ಎಸ್.ಆರ್.ಪಿ.ಎಸ್ ಹಾಗೂ ಎಲ್.ವಿ.ಡಿ ಮಹಾವಿದ್ಯಾಲಯದಲ್ಲಿರುವ ಮತ ಎಣಿಕೆ ಕೇಂದ್ರಗಳು, ಭದ್ರತಾ ಕೊಠಡಿಗಳನ್ನು ವೀಕ್ಷಿಸಿ ಮತ ಎಣಿಕೆಗೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಎಸ್.ಎಸ್ ಸಂಪಗಾವಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸರಿಗಿಡದ್, ತಹಶೀಲ್ದಾರ ಸುರೇಶ ವರ್ಮಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.