ಸಿದ್ದಾಪುರ: ಜಿ.ಪಂ ಸಿಇಓ ಅವರಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

Eshanya Times

ಕೊಪ್ಪಳ, ಆಗಸ್ಟ್ ೦೬ : ಜನಸ್ಪಂದನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕಾರಟಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಪ್ರವಾಸದಲ್ಲಿದ್ದ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಆಗಸ್ಟ್ ೦೬ರಂದು ಸಿದ್ದಾಪುರ ಗ್ರಾಮ ಪಂಚಾಯತಿ ಹಾಗೂ ಇತರ ಸ್ಥಳಗಳಿಗೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಪರಿಶೀಲನೆ ಮಾಡಿದರು.
ಜನಸ್ಪಂದನ ಕಾರ್ಯಕ್ರಮ ಆರಂಭದ ಪೂರ್ವದಲ್ಲಿ ಜಿ.ಪಂ ಸಿಇಓ ಅವರು ಗ್ರಾ.ಪಂ.ಗೆ ಭೇಟಿ ನೀಡಿ, ಅಧ್ಯಕ್ಷರು ಹಾಗೂ ಸರ್ವ ಸದಸ್ಯರೊಂದಿಗೆ ಮೂಲಭೂತ ಸೌಕರ್ಯಗಳು ಮತ್ತು ಇನ್ನಿತರ ಗ್ರಾಮದ ಸಮಸ್ಯೆಗಳ ಕುರಿತು ಚರ್ಚಿಸಿದರು. ಬಳಿಕ ಗ್ರಾ.ಪಂ ಆವರಣದ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ, ಗ್ರಂಥಾಲಯಕ್ಕೆ ಬರುವ ಮಕ್ಕಳ ಹಾಗೂ ಸಾರ್ವಜನಿಕರ ಹಾಜರಾತಿಯನ್ನು ಪರಿಶೀಲನೆ ಮಾಡಿ, ಮೇಲ್ವಿಚಾರಕರೊಂದಿಗೆ ಸಮಾಲೋಚಿಸಿ, ಪರಿಶೀಲಿಸಿದರು. ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ತೆರಳಿ, ಗ್ರಾಮದಲ್ಲಿನ ಹಸಿ, ಒಣ ಕಸ ವಿಂಗಡಣೆಯನ್ನು ಘಟಕದಲ್ಲಿ ಪ್ರಾರಂಭಿಸುವAತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಲದೇ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಭೋಜನಾಲಯಕ್ಕೆ ಭೇಟಿ ನೀಡಿ, ಬಿಸಿಯೂಟದ ಅಡುಗೆ ಸಹಾಯಕರೊಂದಿಗೆ ಮಕ್ಕಳಿಗೆ ನೀಡುವ ಬಿಸಿಯೂಟದ ಮಾಹಿತಿ ಪಡೆದರು. ಬಳಿಕ ಶಾಲಾ ಶೌಚಾಲಯವನ್ನು ಪರಿಶೀಲನೆ ಮಾಡಿ, ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಪಂ ಇಓ ಲಕ್ಷಿö್ಮÃದೇವಿ ಯಾದವ್, ಗ್ರಾ.ಪಂ ಅಧ್ಯಕ್ಷರಾದ ಶಿವಗಂಗಮ್ಮ ಪಂಪಾಪತಿ ಭೋವಿ, ಉಪಾಧ್ಯಕ್ಷರಾದ ಗಂಗಪ್ಪ ಸುಂಕದ್ ಸೇರಿದಂತೆ ಗ್ರಾ.ಪಂ ಸದಸ್ಯರು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";