ರಾಯಚೂರು: ಜು-1:
ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಸರೋಜಿನ ಮಹಿಷಿ ವರದಿ ಜಾರಿ ಹಾಗೂ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ) ಬಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದಿನ ಟಿಪ್ಪು ಸುಲ್ತಾನ್ ಗಾರ್ಡನಲ್ಲಿ ಪ್ರತಿಭಟನೆ ನಡೆಸಿ ರಾಜ್ಯದಲ್ಲಿ ಕನ್ನಡಿಗರಿಗೆ ಶೇ.೧೦೦ ರಷ್ಟು ಉದ್ಯೋಗ ನೀಡುವಂತೆ ಒತ್ತಾಯಿಸಿ ಘೋಷಣೆಗಳು ಕೂಗಲಾಯಿತು.
ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿ, ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ ೧೯೪೬ ಅನ್ವಯ ರಾಜ್ಯ ಸರಕಾರ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು, ಎಲ್ಲಾ ಖಾಸಗಿ ಸಂಸ್ಥೆಗಳಲಿ ಸಿ ಮತ್ತು ಡಿ ದರ್ಜೆಯ ಶೇ. ೧೦೦ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು, ಎಲ್ಲಾ ಖಾಸಗೀ ಸಂಸ್ಥೆಗಳಲಿ ಶೇ.೮೦ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕೆಂದು ಒತ್ತಾಯಿಸಲಾಯಿತು.
೧೫ ವರ್ಷ ಕಾಲ ರಾಜ್ಯದಲ್ಲಿ ನೆಲೆಸಿದವರನ್ನು ಕನ್ನಡಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಆದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು, ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನತ್ಯೆ ರದ್ದುಗೊಳಿಸಿ, ನೀಡಿದ ಭೂಮಿ ಮತ್ತು ಎಲ್ಲಾ ಸೌಲತ್ತುಗಳನ್ನು ಹಿಂಪಡೆಯುವ ನಿಯಮವನ್ನು ರೂಪಿಸಬೇಕು,ಪಾಲಿಸದ ಸಂಸ್ಥೆಗಳಿಗೆ ದಂಡ ವಿಧಿಸಬೇಕು ಮತ್ತು ಕ್ರಿಮಿನಲ್ ಮೊಖದ್ದಮೆ ದಾಖಲಿಸಬೇಕೆಂದು ಒತ್ತಾಯಿಸಲಾಯಿತು.
ಕೇಂದ್ರ ಸರಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ಹೊರತಾದ ಉಳಿದೆಲ್ಲ ಹುದ್ದೆಗಳಲ್ಲೂ ಶೇ.೯೦ರಷ್ಟು ಮೀಸಲಾತಿ ನೀಡಬೇಕು, ರಾಜ್ಯ ಕೇಂದ್ರ ಸರಕಾರದ ಇಲಾಖೆಗಳಲ್ಲಿ ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಸೇರಿದಂತೆ ಅನೇಕ ಬೇಡಿಕೆಗಳು ಈಡೇರಿಸಲು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಗಂಗಣ್ಣ ಡಿಶ್, ಜಿಲಾನಿ ಪಾಷಾ,ದುರ್ಗರಾಜ್ ವಟಗಲ್, ಬಸನಗೌಡ, ಎಂಎಸ್. ವೆಂಕಟೇಶ ಉಪಸ್ಥಿತರಿದ್ದರು.