ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ -ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ

Eshanya Times

ಬೀದರ, ಅಕ್ಟೋಬರ್.8: ಅಕ್ಟೋಬರ್. 17 ರಂದು ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪ್ರತಿವರ್ಷದಂತೆ ಈ ವರ್ಷವು ಅದ್ದೂರಿಯಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಅಂದು ಬೆಳಿಗ್ಗೆ 8:30 ಗಂಟೆಗೆ ಎಲ್ಲಾ ಸರಕಾರಿ ಕಛೇರಿ ಹಾಗೂ ಶಾಲಾ- ಕಾಲೇಜುಗಳಲ್ಲಿ ಮಹರ್ಷಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಂದು ಬೆಳಿಗ್ಗೆ ೧೦:೩೦ ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ 10:45 ಕ್ಕೆ ಮಹರ್ಷಿಗಳ ಭಾವಚಿತ್ರದ ಮೆರವಣಿಗೆ ಜಿಲ್ಲಾಧಿಕಾರಿಗಳ ಕಛೇರಿಯಿಂದ ಆರಂಭವಾಗಿ ನಗರದ ಪ್ರಮುಖ ವೃತ್ತಗಳ ಮೂಲಕ ಪೂಜ್ಯ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮ0ದಿರದವರೆಗೆ ನಡೆಯಲಿದೆ. ನಂತರ ಮಧ್ಯಾಹ್ನ 12:30 ಗಂಟೆಗೆ ಚನ್ನಬಸವ ಪಟ್ಟದ್ದೆವರು ರಂಗಮ0ದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಬೀದರ ನಗರಸಭೆ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಚತೆ ಮಾಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೆರವಣಿಗೆಯಲ್ಲಿ ಎರಡು ಕಲಾ ತಂಡಗಳು ಇರುವಂತೆ ನೋಡಿಕೊಳ್ಳಬೇಕು ಮತ್ತು ಎಲ್ಲಾ ಸರಕಾರಿ ಕಛೇರಿಗಳ ಮೇಲೆ ದೀಪಾಲಂಕಾರ ಮಾಡಬೇಕು. ಈ ಕಾರ್ಯಕ್ರಮಕ್ಕೆ ಬೀದರನ ಹಿರಿಯ ಸಾಹಿತಿ ಡಾ. ರಾಮಚಂದ್ರ ಗಣಾಪೂರ ಅವರನ್ನು ವಿಶೇಷ ಉಪನ್ಯಾಸಕರಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ ಎಂದು ಹೇಳಿದರು.
ಈ ಸಭೆಯಲ್ಲಿ ಬೀದರ ಸಹಾಯಕ ಆಯುಕ್ತರಾದ ಮಹ್ಮದ್ ಶಕೀಲ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶಿವಮಾನಪ್ಪ, ಡಿವೈಎಸ್ಪಿ ಶಿವನಗೌಡ ಪಾಟೀಲ, ಎಮ್.ಎಸ್. ಕಟಗಿ, ಪಂಡಿತ ಚಿದ್ರಿ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷರಾದ ಜಗನ್ನಾಥ ಜಮಾದಾರ, ಶಾರದಾ ಕಲ್ಮಲಕರ್, ನಂದಕುಮಾರ್, ಸಂತೋಷ ಜೋಳದಾಪ, ಮಾಳಪ್ಪಾ ಅಡಸಾರೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";