ಬೀದರ, ಸೆಪ್ಟೆಂಬರ್.೧೦ : ವಿಶ್ವ ಕರ್ಮ ಜಯಂತಿಯನ್ನು ಕಳೆದ ವರ್ಷದಂತೆ ಈ ವರ್ಷವು ಸೆಪ್ಟೆಂಬರ್. ೧೭ ರಂದು ಎಲ್ಲರೂ ಸೇರಿ ವಿಜೃಂಭಣೆಯಿAದ ಆಚರಿಸೋಣ ಎಂದು ಬೀದರ ತಹಶಿಲ್ದಾರ ದಿಲಶಾದ ಮಹತ್ ಹೇಳಿದರು.
ಅವರು ಮಂಗಳವಾರ ಬೀದರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ವಿಶ್ವ ಕರ್ಮ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸೆಪ್ಟೆಂಬರ್. ೧೭ ರಂದು ಬೆಳಿಗ್ಗೆ ೧೧:೩೦ ಗಂಟೆಗೆ ಬೀದರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ವಿಶ್ವ ಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಜಿಲ್ಲಾಧಿಕಾರಿಗಳ ಕಛೇರಿಯಿಂದ ಮೆರವಣಿಗೆ ನಡೆಯಲಿದೆ. ಅಂದು ಮಧ್ಯಾಹ್ನ ೨ ಗಂಟೆಗೆ ಬೀದರ ನಗರದ ಸಾಯಿ ಪುಷ್ಪಾಂಜಲಿ ಕಲ್ಯಾಣ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಎಲ್ಲಾ ಸರಕಾರಿ ಕಛೇರಿ, ಶಾಲಾ-ಕಾಲೇಜುಗಳು ಹಾಗೂ ಗ್ರಾಮ ಪಂಚಾಯತಿಗಳಲ್ಲಿ ವಿಶ್ವ ಕರ್ಮ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಬೇಕು. ಈ ಕುರಿತು ಸರ್ಕಾರದ ಆದೇಶವಿದ್ದು ಇದನ್ನು ಎಲ್ಲರೂ ಪಾಲನೆ ಮಾಡಬೇಕು. ಸಮಾಜದ ಎಲ್ಲರೂ ಸೇರಿ ಒಗ್ಗೂಡಿ ಮಾಡಿದಾಗ ಮಾತ್ರ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದರು.
ಸಮಾಜದ ಮುಖಂಡರು ಜಯಂತಿ ಆಚರಣೆ ಕುರಿತು ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕು. ವಿಶ್ವ ಕರ್ಮ ಕುರಿತು ಭೀಮಶೇನ ಪಾಂಚಾಳ ನಿವೃತ್ತ ಕೃಷಿ ಅಧಿಕಾರಿ ವಿಶೇಷ ಉಪನ್ಯಾಸ ನೀಡುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇದಕ್ಕೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು ಹಾಗೂ ಹೆಚ್ಚಿನ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ವಿಶ್ವ ಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಹೇಳಿದರು.
ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ವಿರೂಪಾಕ್ಷ ಗಾದಗಿ, ಜಿಲ್ಲಾ ವಾರ್ತಾಧಿಕಾರಿ ಡಾ. ಸುರೇಶ ಜಿ., ವಿಶ್ವ ಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ಮಹೇಶ ಪಾಂಚಾಳ, ಉಪಾಧ್ಯಕ್ಷರಾದ ಪಾಂಡುರAಗ ಪಾಂಚಾಳ, ಕಾರ್ಯದರ್ಶಿ ಶಿವಾನಂದ, ಸಿದ್ದಾರೂಢ ವಿಶ್ವಕರ್ಮ, ವಿಜಯಕುಮಾರ ಪಾಂಚಾಳ, ಬಾಬುರಾವ್ ವಿಶ್ವ ಕರ್ಮ ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು.