ರಾಯಚೂರು,ಮೇ.15: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ರಾಯಚೂರಿನ ಹರಿಜನವಾಡ ಗಾಜಗಾರಪೇಟೆ ಶಾಲೆಯಿಂದ ಹರಿಜನವಾಡ ಏರಿಯಾದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಜಾಗೃತಿ ಜಾಥಾವನ್ನು ನಡೆಸಲಾಯಿತು. ಕಾರ್ಯಕ್ರಮಕ್ಕೆ ತಾಲೂಕ ಆರೋಗ್ಯಾಧಿಕಾರಿಗಳಾದ ಡಾ.ಪ್ರಜ್ವಲ ಅವರು ಚಾಲನೆಯನ್ನು ನೀಡಿದರು. ತಾಲೂಕ ಆರೋಗ್ಯ ಅಧಿಕಾರಿಗಳು ಕಾರ್ಯಕ್ರಮ ಕುರಿತು ಮಾತನಾಡಿ ವಿಶ್ವ ಮಲೇರಿಯಾ ದಿನದ ಘೋಷವಾಕ್ಯ “ಹೆಚ್ಚು ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸೋಣ” ಎಂಬ ಘೋಷಣೆಯೊಂದಿಗೆ ಜಾಥಾ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಸರೋಪಾ, ಹಾಗೂ ಮಲೇರಿಯಾ ತಾಂತ್ರಿಕ ಮೇಲ್ವಿಚಾರಣೆ ಅಧಿಕಾರಿಗಳು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಕಿರಿಯ ಆರೋಗ್ಯ ನಿರೀಕ್ಷಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಮಲೇರಿಯಾ ವಿಭಾಗದ ಮೇಲ್ವಿಚಾರಣೆ ಅಧಿಕಾರಿಗಳು, ಸೇರಿದಂತೆ ಫಾರ್ಮಾಸಿ ಅಧಿಕಾರಿ, ಹಾಗೂ ಆಶಾ ಕಾರ್ಯ ಕರ್ತೆಯರು ಹಾಜರಿದ್ದರು.
ಹೆಚ್ಚು ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸೋಣ: ಡಾ.ಪ್ರಜ್ವಲ್
