ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ಸಂಸ್ಥೆಯ ನೌಕರರಿಂದ ಮಾನವ ಸರಪಳಿ ಕೊಪ್ಪಳ ಬಸ್ ಡಿಪೋದಲ್ಲಿ ಲೋಕಸಭಾ ಚುನಾವಣೆ ಸ್ವೀಪ್ ಕಾರ್ಯಕ್ರಮ

Eshanya Times

ಕೊಪ್ಪಳ ಎಪ್ರಿಲ್ 05  : ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕ ಸ್ವೀಪ್ ಸಮಿತಿ ವತಿಯಿಂದ ಕೊಪ್ಪಳ ನಗರದ ಬಸ್ ಡಿಪೋದಲ್ಲಿ ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ಸಂಸ್ಥೆಯ ನೌಕರರು ಹಾಗು ಸಿಬ್ಬಂದಿಗಳು ಮೇ ೦೪ ರಂದು ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.
ಕೊಪ್ಪಳ ತಾಲೂಕಿನ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಹನಮಂತಪ್ಪ ಅವರು ಮಾತನಾಡಿ, ಮೇ-೭ರಂದು ಜರುಗುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸಲು ನಾವೆಲ್ಲರೂ ಕೈ ಜೋಡಿಸೋಣ. ಪ್ರತಿ ಮತ ದೇಶಕ್ಕೆ ಹಿತ ಎನ್ನುವಂತೆ ನಮ್ಮ ಕುಟುಂಬದಲ್ಲಿರುವ ೧೮ ವರ್ಷ ಮೇಲ್ಪಟ್ಟ ಎಲ್ಲರೂ ಸ್ವತಂತ್ರವಾಗಿ ಮತ ಚಲಾಯಿಸಬೇಕು. ಯಾವುದೇ ಆಸೆ-ಆಮೀಷಗಳಿಗೆ ಒಳಗಾಗದೇ ನಿರ್ಭೀತರಾಗಿ ಮತ ಚಲಾಯಿಸಬೇಕು. ಬೇಸಿಗೆ ಇರುವುದರಿಂದ ಮುಂಜಾನೆಯ ಅವಧಿಯಲ್ಲಿ ಚುನಾವಣೆ ಆಯೋಗವು ನಿರ್ದೇಶನ ನೀಡಿರುವ ಅಗತ್ಯ ದಾಖಲಾತಿಯನ್ನು ಮತಗಟ್ಟೆಗೆ ತೆಗೆದುಕೊಂಡು ಹೋಗಿ ನಿಮ್ಮ ಹಕ್ಕನ್ನು ಚಲಾಯಿಸಿರಿ. ಅವಿದ್ಯಾವಂತರಿಗಿAತ ವಿದ್ಯಾವಂತ ವರ್ಗವೇ ಮತದಾನದಿಂದ ದೂರ ಉಳಿಯುತ್ತಾರೆ ಎಂಬ ಅಪವಾದ ಇದೆ. ಇದನ್ನು ತೆಗೆದುಹಾಕಿ ಮೇ ೭ ರಂದು ಕೇವಲ ಐದು ನಿಮಿಷ ಮತಗಟ್ಟೆಗೆ ಬಂದು ನಿರ್ಭೀತಿಯಿಂದ, ಪ್ರಾಮಾಣಿಕವಾಗಿ ಮತ ಚಲಾಯಿಸೋಣ ಎಂದರು.
ದೇಶದ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕಾಗಿ ಮತದಾನ ಪ್ರಜಾಪ್ರಭುತ್ವದ ಮೂಲಭೂತ ಹಕ್ಕು. ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿ ಗಟ್ಟಿಗೊಳಿಸಲು ಪ್ರಜೆಗಳ ಪ್ರತ್ಯಕ್ಷ ಪಾಲ್ಗೊಳ್ಳುವಿಕೆ ನಿರಂತರವಾಗಿ ಇರಬೇಕು. ಚುನಾವಣೆ ನಡೆದಾಗ ಮತಗಟ್ಟೆಗೆ ಬಂದು ಮತದಾನ ಮಾಡುವುದು ಅದರಲ್ಲಿ ಕಣ್ಣಿಗೆ ಕಾಣುವ ಒಂದು ಸಣ್ಣ ಸಂಕೇತ ಇದರ ಪರಿಣಾಮ ಮಾತ್ರ ಬಹಳ ದೊಡ್ಡದು ಎಂದರು.
ನಂತರ ಕಡ್ಡಾಯ ಮತದಾನ ಮಾಡಲು ಎಲ್ಲಾ ನೌಕರರು, ಕಾರ್ಮಿಕರಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಸ್ವೀಪ್ ಕಾರ್ಯಕ್ರಮದಲ್ಲಿ ಡಿಪೋ ಮ್ಯಾನೇಜರ್ ಬಸವರಾಜ ಬಟ್ಟೂರ, ತಾಲೂಕ ಪಂಚಾಯತ್ ಸಹಾಯಕ ನಿರ್ದೇಶಕ ಮಹೇಶ್, ತಾಲೂಕ ಯೋಜನಾಧಿಕಾರಿ ರಾಜೇಸಾಬ್ ನದಾಫ್, ಜಿಲ್ಲಾ ಐಇಸಿ ಸಂಯೋಜಕ ಶ್ರೀನಿವಾಸ್ ಚಿತ್ರಗಾರ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ತಾಲೂಕ ಸ್ವೀಪ್ ಸಮಿತಿ ಸದಸ್ಯರಾದ ಬಸವರಾಜ ಬಳಿಗಾರ, ವಿರೇಶ್ ಬಡಿಗೇರ, ತಾ.ಪಂ ಸಿಬ್ಬಂದಿಗಳಾದ ಗಿರೀಶ್, ನಾಗರಾಜ ಚಿಲವಾಡಗಿ, ಬಸ್ ಸಾರಿಗೆ ಸಿಬ್ಬಂದಿಗಳಾದ ಚಾಲಕರು, ನಿರ್ವಾಹಕರು, ತಾಂತ್ರಿಕ ವಿಭಾಗದ ಸಿಬ್ಬಂದಿಗಳು ಸೇರಿದಂತೆ ೬೫ ಕ್ಕೂ ಹೆಚ್ಚು ನೌಕರರು ಭಾಗವಹಿಸಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";