ಬೀದರ, ಆಗಸ್ಟ್.೦೪: ಬೀದರ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶನಿವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೆಕೆಆರ್‌ಡಿಬಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲೋಕೋಪಯೋಗಿ ಇಲಾಖೆ, ಪಂಚಾಯತರಾಜ್ ಇಂಜಿನಿಯರಿAಗ, ಕೆಆರ್‌ಐಡಿಎಲ್ ವತಿಯಿಂದ ಕೆಕೆಆರ್‌ಡಿಬಿ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಬೇಗನೆ ಪೂರ್ಣಗೊಳಿಸಬೇಕು. ಮಳೆಯಿಂದ ಹಾನಿಗೊಳಗಾದ ಸೇತುವೆಗಳು, ರಸ್ತೆಗಳನ್ನು ಕೂಡಲೆ ಟೆಂಡರ ಕರೆದು ದುರಸ್ತಿಗೊಳಿಸಬೇಕು. ಮಾಂಜ್ರಾ ನಂದಿಯಿAದ ಅಕ್ಕ ಪಕ್ಕದ ಜಮೀನಿನಲ್ಲಿ ಹೆಚ್ಚುವರಿ ನೀರು ಬಂದು ಬೆಳೆ ನಾಶ ಆಗಿದೆ, ಅಂತಹ ರೈತರಿಗೆ ಪ್ರಕೃತಿ ವಿಕೋಪದಡಿ ಪರಿಹಾರ ನೀಡಬೇಕು ಮತ್ತು ಮನೆ ಕುಸಿತ ಆದವರಿಗೂ ಆದಷ್ಟು ಬೇಗನೆ ಪರಿಹಾರ ಕೊಡುವ ಕೆಲಸ ಆಗಬೇಕಾಗಿದೆ. ಕಂದಾಯ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳು ಕೂಡಲೆ ಹಾನಿಯ ವರದಿ ಸಲ್ಲಿಸುವಂತೆ ಸೂಚಿಸಿದರು. ಕಳೆದ ಸಾಲಿನಲ್ಲಿ ಬೆಳೆ ಹಾನಿಯಾದವರಿಗೆ ಇನ್ನು ಪರಿಹಾರ ದೊರಕಿಲ್ಲ ಎಂಬುವುದು ನನ್ನ ಗಮನಕ್ಕೆ ಬಂದಿದೆ. ತಾಂತ್ರಿಕ ಸಮಸ್ಯೆಗಳಿದ್ದರೆ ಕೂಡಲೆ ಸರಿಪಡಿಸಿ ಕ್ರಮ ವಹಿಸಬೇಕು. ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆ ಆಗಿದ್ದು, ಬೆಳೆಗಳು ಉತ್ತಮವಾಗಿದೆ. ರೈತರಿಗೆ ಕಟಾವು ಸಂದರ್ಭದಲ್ಲಿ ಕಟಾವು ಮಷಿನಗಳ ತೊಂದರೆ ಆಗದಂತೆ ಸಂಬAಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕೆಂದರು.
ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ೫ ಸಕ್ಕರೆ ಕಾರ್ಖಾನೆಗಳಲ್ಲಿ ೩ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕಬ್ಬಿನ ಬಾಕಿ ಹಣ ಪಾವತಿಸಿದ್ದು ಬಾಕಿ ಉಳಿಸಿಕೊಂಡಿರುವ ಬೀದರ ಕಿಸಾನ ಸಕ್ಕರೆ ಕಾರ್ಖಾನೆ ಮೋಗದಾಳ ೩ ಕೋಟಿ ೪೦ ಲಕ್ಷ, ಭಾಲ್ಕೇಶ್ವರ ಸಕ್ಕರೆ ಕಾರ್ಖಾನೆ ಭಾಲ್ಕಿ ೩ ಕೋಟಿ ೧೮ ಲಕ್ಷ ರೂ. ರೈತರಿಗೆ ಹಣ ಪಾವತಿಸಬೇಕಾಗಿದ್ದು ಕೂಡಲೆ ಕಾರ್ಖಾನೆಗಳಲ್ಲಿ ದಾಸ್ತಾನು ಇರುವಂತಹ ಸಕ್ಕರೆಯನ್ನು ಜಪ್ತಿ ಮಾಡಿಕೊಂಡು ಹರಾಜು ಮಾಡಿ ರೈತರಿಗೆ ಕೂಡಲೆ ಹಣ ಪಾವತಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವಿದ್ಯುತ್‌ನಿಂದ ಜೀವ ಹಾನಿಯಾದ ಕುಟುಂಬಳಿಗೆ ಸಚಿವರು ಪರಿಹಾರದ ಚೆಕ್ಕಗಳನ್ನು ವಿತರಿಸಿದರು.
ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ, ಅಪರ ಜಿಲ್ಲಧಿಕಾರಿಗಳಾದ ಶಿವಕುಮಾರ ಶೀಲವಂತೆ, ಬಿದರ ಸಹಾಯಕ ಆಯುಕ್ತರಾದ ಲವೀಶ ಓರಡಿಯಾ, ಬಸವಕಲ್ಯಾಣ ಸಹಾಯಕ ಆಯುಕ್ತರಾದ ಪ್ರಕಾಶ ಕುದರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಸುರೇಖಾ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಶಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಡಾ.ಧ್ಯಾನೇಶ್ವರ ನಿರಗುಂಡೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸಿಂಧು ಎಚ್.ಎಸ್. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.