ರೈತ ನಮ್ಮೆಲ್ಲರಿಗೂ ಆಹಾರ ನೀಡುವ ಅನ್ನದಾತ- ಸಚಿವ ಈಶ್ವರ ಬಿ.ಖಂಡ್ರೆ

Eshanya Times
WhatsApp Group Join Now

ಬೀದರ. ಮಾರ್ಚ.೦೨ :

ರೈತ ನಮ್ಮೆಲ್ಲರಿಗೂ ಆಹಾರ ನೀಡುವ ಅನ್ನದಾತನಾಗಿದ್ದು, ಅವರ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.
ಅವರು ಶನಿವಾರ ಜಿಲ್ಲಾ ಪಂಚಾಯತ ಹಾಗೂ ಕೃಷಿ ಇಲಾಖೆ ಬೀದರ ಸಹಯೋಗದಲ್ಲಿ ಬೀದರ ನಗರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯ ನಡಿಗೆ- ೨೦೨೪ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಕಾರ್ಯಕ್ರಮ ಇಂದು ಹಮ್ಮಿಕೊಂಡಿರವುÀದರ ಉದ್ದೇಶ ಸಿರಿಧಾನ್ಯಗಳಿಗೆ ಹೆಚ್ಚಿನ ಒತ್ತು ನೀಡುವದಾಗಿದೆ. ನಮ್ಮ ಬೀದರ ಜಿಲ್ಲೆಯಲ್ಲಿ ಶೇ. ೭೦ ಪ್ರತಿಶತ ಜನರು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಸಾವಯವ ಕೃಷಿಯ ಆಹಾರಗಳಾದ ಸಜ್ಜೆ, ಬರಗು, ರಾಗಿ, ನವಣೆ ಹಾರಕ, ಸಾವೆಗಳ ಸೇವನೆಯಿಂದ ಬಿಪಿ, ಶುಗರ, ಡಯಾಬಿಟಿಸ್ ನಂತಹ ಇತರೆ ಕಾಯಿಲೆಗಳು ಬರುವದಿಲ್ಲ ಎಂದರು.
ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ಸಾವಯವ ಬೆಳೆಗಳನ್ನು ಹೆಚ್ಚು ಬೆಳೆಯುತ್ತಿರುವ ಮೊದಲ ರಾಜ್ಯವಾಗಿದೆ ಹಾಗಾಗಿ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಸಿರಿಧಾನ್ಯ ವಾಣಿಜ್ಯ ಮೇಳವನ್ನು ಆಯೋಜಿಸಲಾಗಿತ್ತು. ಕೃಷಿ ಲಾಭದಾಯಕವಾಗಲು ಅದಕ್ಕೆ ಸೂಕ್ತ ಬೆಲೆ ಸಿಗುವದರ ಜೊತೆಗೆ ವ್ಯವಸ್ಥಿತ ಮಾರುಕಟ್ಟೆಯು ಬೇಕು ಮುಂದೊAದು ದಿನ ಕೃಷಿಗೆ ಎಲ್ಲರೂ ಅದರ ಕಡೆ ನೋಡುವ ಕಾಲ ಬರುತ್ತದೆ ಎಂದರು.
ನಮ್ಮ ಸರ್ಕಾರ ಈ ಹಿಂದೆ ಸಾವಯವ ಪರಿಷ್ಕೃತ ನೀತಿ ಘೋಷಣೆ ಮಾಡಿದೆ. ಇಂದಿರಾಗಾAಧಿ ಅವರು ಹಲವಾರು ಆಣೆಕಟ್ಟುಗಳನ್ನು ಕಟ್ಟಿಸಿ ಹಸಿರು ಕ್ರಾಂತಿಯನ್ನು ಮಾಡಿದ್ದರು. ಸಾವಯವ ಕೃಷಿಯತ್ತ ಇಂದಿನ ಯುವಕರು ಹೆಚ್ಚಿನ ಒಲವು ತೋರಿಸಬೇಕು. ಇಂದು ಸಣ್ಣ- ಸಣ್ಣ ಮಕ್ಕಳಿಗೂ ಹಲವಾರು ಕಾಯಿಲೆಗಳು ಬರುತ್ತಿವೆ. ನಮ್ಮ ಆಹಾರ ಜೀವನ ಶೈಲಿ ಕೂಡ ಇದಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಕೇಂದ್ರ ನೂತನ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಹ ಸಚಿವರಾದ ಭಗವಂತ ಖೂಬಾ ಅವರು ಮಾತನಾಡಿ, ನಾವು ಚಿಕ್ಕವರಿದ್ದಾಗ ಸಿರಿಧಾನ್ಯ ಎಲ್ಲರ ಮನೆಯಲ್ಲಿ ಉಪಯೋಗಿಸುತ್ತಿದ್ದೆವು. ಅನ್ನವನ್ನು ಅಂದು ಶ್ರೀಮಂತರು ಮಾತ್ರ ಊಟ ಮಾಡುತ್ತಿದ್ದರು. ೨೦೨೨-೨೩ ನೇ ಸಾಲಿನಲ್ಲಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಯುಎನ್‌ಓ ದಲ್ಲಿ ಘೋಷಣೆ ಮಾಡಿಸಿದರು. ರೈತರು ದೇಶದ ೧೪೦ ಕೋಟಿ ಜನವರಿ ಹೊಟ್ಟೆ ತುಂಬಿಸುವ ಕೆಲಸ ಮಾಡುವದರ ಜೊತೆಗೆ ಶೇ. ೩೦ ಪ್ರತಿಶತ ಆಹಾರವನ್ನು ವಿದೇಶಕ್ಕೆ ರಪ್ತು ಮಾಡುತ್ತಾರೆ ಎಂದರು.
ಅನ್ನದಾತ ಕಷ್ಟಪಟ್ಟು ನಮ್ಮೆಲ್ಲರ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಾನೆ. ಉತ್ತಮ ಆಹಾರ ನಮ್ಮ ನಾಗರಿಕತೆಯಲ್ಲಿ ರಕ್ತಗತವಾಗಿ ಬಂದಿದೆ. ಹಿಂದೆ ಸಿರಿಧಾನ್ಯಗಳಿಗೆ ಬೇಡಿಕೆ ಇರಲಿಲ್ಲ ಈಗ ದೊಡ್ಡ- ದೊಡ್ಡ ಹೋಟೆಲ್‌ಗಳಲ್ಲಿ ಅದರ ಬೇಡಿಕೆ ಹೆಚ್ಚಾಗಿದೆ. ಕಡಿಮೆ ನೀರಿನಲ್ಲಿ ಈ ಬೆಳೆಗಳನ್ನು ಬೆಳೆಯಬಹುದಾಗಿದೆ ಎಂದು ಹೇಳಿದರು.
ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರತೇಂದ್ರನಾಥ ಸೂಗೂರ ಪ್ರಾಸ್ತಾವಿಕವಾಗಿ ಮಾತನಾಡಿ, ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಒಳ್ಳೆಯದು. ಇಂದಿನ ವೈಜ್ಞಾನಿಕ ಯುಗದಲ್ಲಿ ಯುವ ಪೀಳಿಗೆ ದೇಶಿಯ ಆಹಾರವಾದ ಸಿರಿಧಾನ್ಯ ಉಳಿಸಿ ಬೆಳೆಸಿಕೊಂಡು ಹೋಗಬೇಕು ಇದರಿಂದ ಸಾಕಷ್ಟು ರೋಗ ರುಜಿನಿಗಳು ದೂರ ಮಾಡಬಹುದು ಈ ಬೆಳೆಗಳನ್ನು ಬರಗಾಲದ ಮಿತ್ರ ಎಂದು ಕರೆಯುತ್ತಾರೆ ಎಂದು ಹೇಳಿದರು.

ಅಂಬೇಡ್ಕರ್ ವೃತ್ತದಲ್ಲಿ ಸಚಿವರು ಮಡಿಕೆಗಳಿಗೆ ಸಿರಿಧಾನ್ಯ ಸುರಿಯುವ ಮೂಲಕ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸಿರಿಧಾನ್ಯ ಕಿರು ಹೊತ್ತಿಗೆಯನ್ನು ಬಿಡುಗಡೆಗೊಳಿಸಲಾಯಿತು. ಸಿರಿಧಾನ್ಯ ನಡಿಗೆ ಬೀದರ ನಗರದ ಅಂಬೇಡ್ಕರ್ ವೃತ್ತದಿಂದ ಶಿವನಗರ ಕ್ರಾಸವರೆಗೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ನಗರ ಸಭೆ ಅಧ್ಯಕ್ಷರಾದ ಮೊಹ್ಮದ ಗೌಸ್, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷರಾದ ಸಿದ್ರಾಮಯ್ಯ ಸ್ವಾಮಿ, ಕರ್ನಾಟಕ ರಾಜ್ಯ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ವಿಶ್ವನಾಥ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ. ತೋಟಗಾರಿಕೆ ಮಹಾವಿದ್ಯಾಲಯ ಬೀದರ. ಡೀನ್. ಡಾ.ಎಸ್.ವಿ.ಪಾಟೀಲ್, ಕೃಷಿ ವಿಜ್ಞಾನ ಕೇಂದ್ರ ಬೀದರ ಡಾ.ಸುನಿಲ್ ಕುಮಾರ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿಲ್ಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ಕುಮಾರ ಗಂಧಗೆ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರತೇಂದ್ರನಾಥ ಸೂಗೂರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೆಶಕರಾದ ಸುರೇಖಾ, ಬೀದರ ತೋಟಗಾರಿಕೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ರೈತರು, ಕೃಷಿ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article

Eshanya Times, Regional Kannada Daily is a leading news paper in Kalyana Karnataka (North Karnataka). Which is having large number of circulation in the districts of Raichur, Koppla, Bellary, Yadgir, Gulbarga, Bidar, Vijayanagara, Bagalkote and in the capital city of Bangalore.

This News Paper having Registred Office in Raichur City, Karnataka State.

The main mooto of the Eshanya Times news paper is to serve the nation and to give wide publicity of Government Developmental programmes and policies which are execuited in Government and also to give social justice to the people of Karnataka.

Copyright © 2024. Eshanya Times.  All Rights Reserved,

Powered By KhushiHost
24/7 Help Desk Support – Call Now +919060329333 

error: Content is protected !!