ಮಳೆಯಿಂದ ಹಾನಿಯಾದ ಮನೆಗಳಿಗೆ ಎನ್‌ಡಿಆರ್‌ಎಫ್ ನಿಯಮದಂತೆ ಸೂಕ್ತ ಪರಿಹಾರ ನೀಡಲಾಗುವುದು-ಸಚಿವ ಈಶ್ವರ ಬಿ.ಖಂಡ್ರೆ

Eshanya Times

ಬೀದರ, ಜುಲೈ.29 : ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಬೀದರ ತಾಲ್ಲೂಕಿನ ಕಾಶೆಂಪೂರ, ಕಾಡವಾದ ಹಾಗೂ ಚಟನಳ್ಳಿ ಗ್ರಾಮಗಳಲ್ಲಿ ಮಳೆಯಿಂದ ಹಾನಿಯಾದ ಮನೆ ಹಾಗೂ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹಾನಿಯಾದ ಮನೆಗಳ ಗೋಡೆ ಕುಸಿದಕ್ಕೆ ೬,೫೦೦ ರೂ. ಪರಿಹಾರ ಧನ ಮಂಜೂರಾತಿ ಆದೇಶ ಪ್ರತಿಗಳನ್ನು ಫಲಾನುಭವಿಗಳಿಗೆ ನೀಡಿ ಎನ್.ಡಿ.ಆರ್.ಎಫ್ ನಿಯಮದ ಪ್ರಕಾರ ಪರಿಹಾರ ನೀಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಸೋಮವಾರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಬಹಳಷ್ಟು ಜನರ ಮನೆಗಳಿಗೆ ಹಾನಿಯನ್ನುಂಟಾಗಿರುತ್ತದೆ. ಹಾನಿಗೊಳಗಾದ ಮನೆಗಳಿಗೆ ಸರ್ಕಾರದಿಂದ ತಕ್ಷಣವೇ ೬೫೦೦ ರೂ. ಹಾಗೂ ಅದರ ಜೊತೆ ೫೦೦೦೦ ರೂ. ರಾಜ್ಯ ಸರ್ಕಾರದಿಂದ ಪರಿಹಾರ ನೀಡಲಾಗುತ್ತಿದೆ. ಮತ್ತು ಪೂರ್ಣ ಪ್ರಮಾಣದ ಹಾನಿಗೊಳಗಾದ ಮನೆಗಳಿಗೆ ಎನ್.ಡಿ.ಆರ್.ಎಫ್. ಮತ್ತು ಎಸ್.ಡಿ.ಆರ್.ಎಫ್. ನಿಯಮಾನುಸಾರ ೧,೨೫,೦೦೦ ರೂ. ಪರಿಹಾರದ ಜೊತೆಗೆ ಒಂದು ಪಕ್ಕಾ ಮನೆ ನೀಡಬೇಕೆಂದು ಈಗಾಗಲೇ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ. ಈ ಆದೇಶವು ಕೆಲವು ದಿನಗಳಲ್ಲಿ ಜಾರಿಯಾಗಲಿದೆ ಎಂದು ಹೇಳಿದರು.
ಬೆಳೆ ಹಾನಿಯಾದ ಕಾಶೆಂಪೂರ ಹಾಗೂ ಕಾಡವಾದ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿದ ಸಚಿವರು ಬೆಳೆ ಹಾನಿಯಾದಂತಹ ಜಮೀನಗಳ ಸರ್ವೆ ಮಾಡಿ ಸರ್ಕಾರಕ್ಕೆ ನಿಖರವಾದ ವರದಿ ಸಲ್ಲಿಸಬೇಕು. ಸಕಾಲಕ್ಕೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ಸಂಬAಧಿಸಿದ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂಖಾನ್, ನಗರಸಭೆ ಅಧ್ಯಕ್ಷರಾದ ಮೋಹ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಬೀದರ ಸಹಾಯಕ ಆಯುಕ್ತರಾದ ಲವೀಶ್ ಒರಡಿಯಾ, ಮುಖಂಡರಾದ ಅಮೃತರಾವ ಚಿಮಕೋಡೆ, ಬೀದರ ತಹಶಿಲ್ದಾರ ದಿಲಶಾದ ಮೆಹತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";