ಬೆಂಗಳೂರು:
ಕನಿಷ್ಟ ಬೆಂಬಲ ಬಲ ಯೋಜನೆಯಡಿ ರೈತರಿಂದ ಜೋಳ ಕರೀದಿಸಲು ರಾಯಚೂರು ಜಿಲ್ಲೆಯಲ್ಲಿ ಬಿಳಿಜೋಳ ಖರೀದಿ ಕೇಂದ್ರ ಸ್ಥಾಪಿಸುವಂತೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಹಾಗೂ ಸರ್ಕಾರದ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದ್ದಾರೆ. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದಾರೆ.
ರಾಯಚೂರು ಜಿಲ್ಲೆಯ ರೈತರ ಮನವಿಯ ಮೇರೆಗೆ ಹಾಗೂ ಜಿಲ್ಲೆಯಾದ್ಯಂತ ರೈತರು ಹೆಚ್ಚು ಜೋಳ ಬೆಳೆಯುವದರಿಂದ, ಈಗಾಗಲೆ ರೈತರು ಸಂಕಷ್ಟದಲ್ಲಿರುವುದರಿAದ ಅನ್ನದಾತರ ಸಂರಕ್ಷಣೆಗಾಗಿ ಬೆಂಬಲಬೆಲೆ ಯೋಜನೆಯಡಿ ಖರೀದಿ ಕೇಂದ್ರ ಸ್ಥಾಪಿಸುವಂತೆ ಸಚಿವರು, ಕೃಷಿ ಮಾರುಕಟ್ಟೆ ನಿರ್ದೇಶಕರಿಗೆ, ಸರ್ಕಾರದ ಕಾರ್ಯದರ್ಶಿ ಅವರ ಗಮನಕ್ಕೆ ತಂದು ಚರ್ಚಿಸಲಾಗಿದೆ. ಇದಕ್ಕೆ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಕಾರ್ಯದರ್ಶಿ ಅವರು ಶೀಘ್ರ ರೈತರ ಅನುಕೂಲಕ್ಕಾಗಿ ಜೋಳ ಖರೀದಿ ಕೇಂದ್ರ ಸ್ಥಾಪಿಸಲು ಸಮ್ಮತಿಸುವುದಾಗಿ ಎಂದು ತಿಳಿಸಿದ್ದಾರೆ.
ಈ ಹಿನ್ನಲೆ ರಾಯಚೂರು ಜಿಲ್ಲೆಯಲ್ಲಿ ಬಿಳಿಜೋಳ ಕರೀದಿ ಕೇಂದ್ರ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳೊಂದಿಗೆ ಸಚಿವರು ಮಾತನಾಡಿದ್ದಾರೆ.