ರಾಯಚೂರು,ಜೂ.೨೦: ಸರಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಶಾಲೆ ಆರಂಭಕ್ಕೆ ವಿರೋಧಿಸಿ ಹಾಗೂ ಆದೇಶ ಹಿಂಪಡೆಯಲು ಒತ್ತಾಯಿಸಿ ಅಂಗನವಾಡಿ ನೌಕರರು ನಡೆಸುತ್ತಿರುವ ಹೋರಾಟಕ್ಕೆ ಶಾಸಕ ಡಾ.ಶಿವರಾಜ್ ಪಾಟೀಲ್ ಬೆಂಬಲಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಮುಂದಿನ ಟಿಪ್ಪು ಸುಲ್ತಾನ್ ಗಾರ್ಡನಲ್ಲಿ ಅಂಗನವಾಡಿ ನೌಕರರು ನಡೆಸುತ್ತಿರುವ ಹೋರಾಟ ಎಡನೇ ದಿನಕ್ಕೆ ಕಾಲ್ಟಿದ್ದು, ಗುರುವಾರದಂದು ಶಾಸಕ ಡಾ. ಶಿವರಾಜ್ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಬೆಂಬಲಿಸಿ ಮಾತನಾಡಿ, ಸರಕಾರದ ನಿರ್ಧಾರ ದಿಂದ ಅಂಗನವಾಡಿ ಕೇಂದ್ರಗಳು ಮುಚ್ಚುವ ಆತಂಕವಿದೆ. ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳು ಎಲ್ಕೆಜಿ, ಯುಕೆಜಿ ಕೇಂದ್ರಗಳಿಗೆ ಸೇರಿದರೆ ಮಕ್ಕಳ ಕೊರತೆಯಿಮದ ಅಂಗನವಾಡಿ ಕೇಂದ್ರಗಳು ಮುಚ್ಚಿ ಸಾವಿರಾರು ಸಂಖ್ಯೆಯಲಲಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಬೀದಿ ಪಾಲಾಗಬೇಕಾಗುತ್ತದೆ. ಕೂಡಲೇ ಆದೇಶ ವಾಪಸ್ ಪಡೆಯುವಂತೆ ಸರಕಾರಕ್ಕೆ ಪತ್ರ ಬರೆದು ಒತ್ತಾಯಿಸುವುದಾಗಿ ಹಾಗೂ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಹೆಚ್. ಪದ್ಮಾ,ಪಾವತಿ, ಡಿ.ಎಸ್.ಶರಣಬಸವ ಸೇರಿದಂತೆ ಅನೇಕರು.