ರಾಯಚೂರು: ಜೂ-29: ದೆಹಲಿಯ ಉದ್ಯೋಗ ಭವನದಲ್ಲಿ ರಾಯಚೂರು ಲೋಕಸಭಾ ಸಂಸದರಾದ ಜಿ ಕುಮಾರ್ ನಾಯಕ ಅವರು ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಭೂಪತಿ ರಾಜು ಶ್ರೀನಿವಾಸ ವರ್ಮಾ ಅವರನ್ನು ಭೇಟಿ ಮಾಡಿ ರಾಯಚೂರಿನಲ್ಲಿ ಕೈಗಾರಿಕೋದ್ಯಮ ಸ್ಥಾಪನೆ ಕುರಿತು ಮಾತನಾಡಿದರು.
ರಾಯಚೂರು ಜಿಲ್ಲೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆಯಾಗಿ ಆಯ್ಕೆ ಮಾಡಲಾಗಿದೆ. ಈ ಭಾಗದ ಆರ್ಥಿಕ ಬಲವರ್ಧನೆಗಾಗಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಈ ಭಾಗದ ನಿರುದ್ಯೋಗ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕಾಗಿದೆ.
ರಾಯಚೂರು ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗಾಗಿ ವಿಶಾಲವಾದ ಭೂಮಿ, ನೀರು, ಸಾರಿಗೆ ಹಾಗೂ ರೈಲ್ವೆ ಸಂಪರ್ಕವಿದೆ. ಅಲ್ಲದೆ ಈಗಾಗಲೆ ಅನುಮೋದಿಸಲಾಗಿರುವ ವಿಮಾನ ನಿಲ್ದಾಣ ಕಾಮಗಾರಿ ಪ್ರಾರಂಭಿಸಲಾಗಿದೆ. ಕಾರಣ ಕೈಗಾರಿಕೆಗಳ ಸ್ಥಾಪನೆಯಲ್ಲಿ ರಾಯಚೂರು ಜಿಲ್ಲೆಯನ್ನು ಪರಿಗಣಿಸಬೇಕೆಂದು ಸಚಿವರೊಂದಿಗೆ ಮಾತನಾಡಿದರು.