ಬೆಂಗಳೂರು: ಜು-19:
ವಿಧಾನಸಭೆ ಅಧಿವೇಶನ ಹಿನ್ನಲೆ ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದರಾದ ಜಿ. ಕುಮಾರ ನಾಯಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡುವ ಮೂಲಕ ರಾಯಚೂರು ಮತ್ತು ಯಾದಗಿರಿ ಭಾಗದ ಅಭಿವೃದ್ಧಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುತ್ತಿರುವ ಪ್ರಮುಖ ವಿಚಾರಗಳ ಕುರಿತು ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳು ಆದ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಬೋಸ್ ರಾಜು, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಅಐP ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ , ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಸೇರಿದಂತೆ ಪಕ್ಷದ ಶಾಸಕರು ಉಪಸ್ಥಿತರಿದ್ದರು.