ಶಹಾಪುರ: ಪೌಷ್ಟಿಕ ಆಹಾರ, ಸ್ವಚ್ಛತೆ ಆರೋಗ್ಯಕರ ಜೀವನ ನಡೆಸುವುದಕ್ಕೆ ಅಗತ್ಯ.ನಮ್ಮ ಮನೆಯ ಸುತ್ತಮುತ್ತಲಿನಲ್ಲಿ ಸಿಗುವ ಆಹಾರ ಪದಾರ್ಥಗಳಲ್ಲಿ ಸಾಕಷ್ಟು ಪೌಷ್ಟಿಕ ಅಂಶಗಳಿವೆ. ಅವುಗಳನ್ನು ಸ್ವಚ್ಛವಾಗಿ ದಿನನಿತ್ಯದ ಆಹಾರದಲ್ಲಿ ಬಳಸುವುದರಿಂದ ಆರೋಗ್ಯಕರ ಜೀವನ ನಡೆಸಬಹುದು ಎಂದು ತಾಲೂಕು ಪಂಚಾಯತ ಸಹಾಯಕ ನಿರ್ದೇಶಕರಾದ ಬಿ ಕೆ ಬಿರಾದಾರ ತಿಳಿಸಿದ್ದಾರೆ.ಕೇಂದ್ರ ಸಂವಹನ ಇಲಾಖೆ ಮಂಗಳೂರು, ಕಲಬುರ್ಗಿ, ತಾಲೂಕು ಪಂಚಾಯತ, ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ ಜಂಟಿ ಆಶಯದಲ್ಲಿ ನಡೆದ ಪೌಷ್ಟಿಕ ಆಹಾರ ಮಾಸಾಚರಣೆ,ಸ್ವಚ್ಛತಾ ಅಭಿಯಾನ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಹಾಪುರ ನಗರಸಭಾಧ್ಯಕ್ಷೆ ಶ್ರೀಮತಿ ಮೆಹರೂನ ಬೇಗಮ್ ಲಿಯಾಕತ್ ಪಾಷಾ ವಿವಿಧ ಯೋಜನೆಗಳನ್ನು ಕುರಿತ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದರು.
ಪರಿಸರ ಅಭಿಯಂತರರಾದ ಹರೀಶ್ ಸಜ್ಜನಶೆಟ್ಟಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ದೇಸಾಯಿ ಕ್ಷೇತ್ರ ಪ್ರಚಾರ ಅಧಿಕಾರಿ ಜಿ ತುಕಾರಾಮ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್ಎಸ್ಎಸ್ ಅಧಿಕಾರಿ ಡಾ. ಮಹದೇವಪ್ಪ ಬೇಲೂರ, ಎಪಿಡಿ ಸಂಸ್ಥೆಯ ವೀರಣ್ಣ ಬಿರಾದಾರ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಅಸೋಸಿಯೇಷನ್ ಫಾರ್ ಪೀಪಲ್ ವಿತ್ ಡಿಸೆಬಿಲಿಟಿ ಶಹಾಪುರ ಇವರು ವಸ್ತು ಪ್ರದರ್ಶನ ಏರ್ಪಡಿಸಿದ್ದರು.ವಿಶೇಷ ಚೇತನರಿಗಾಗಿ ಕೃತಕ ಅಂಗಾಂಗ ಜೋಡಣೆಗೆ ನೋಂದಾವಣೆ ಮಾಡಿಕೊಂಡರು.ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಅಸೋಸಿಯೇಷನ್ ಫಾರ್ ಪೀಪಲ್ ವಿತ್ ಡಿಸೆಬಿಲಿಟಿ ಶಹಾಪುರ ಇವರು ಕೇಂದ್ರ ಸಂವಹನ ಇಲಾಖೆಯ ನೊಂದಾಯಿತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.