ರಾಯಚೂರು: ಒಳ ಮೀಸಲಾತಿಯ ವರ್ಗೀಕರಣ ಜಾರಿಗೆ ತಂದು ಕೇಂದ್ರ ಸರ್ಕಾರಕ್ಕೆ ಶಿಫಾಸು ಮಾಡಿರುವ ವರದಿ ಹಿಂಪಡೆಯಬೇಕು ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಒತ್ತಾಯಿಸಿದರು.
ಬುಧವಾರ ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಪರಿಶಿಷ್ಟ್ಟ ಜಾತಿಯಲ್ಲಿನ ಅವಕಾಶ ವಂಚಿತ, ಶೋಷಿತ ಒಳಸಮುದಾಯಗಳನ್ನು ಮರು ವರ್ಗೀಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅವಕಾಶವಿಲ್ಲ. ಆದರೂ ಹಿಂದಿನ ರಾಜ್ಯ ಸರ್ಕಾರ ಮೀಸಲಾತಿಯ ಆಶಯವಾದ ಸಾಮಾಜಿಕ, ಶೈಕ್ಷಣಿಕ ಮೂಲ ಮಾನದಂಡವನ್ನು ಕಡೆಗಣಿಸಿ ಕೇವಲ ಜನಸಂಖ್ಯೆ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಗುರುತಿಸಲಾಗುತ್ತಿದೆ ಎಂದು ದೂರಿದರು.
ರಾಜ್ಯದ 101 ಪರಿಶಿಷ್ಟ್ಟ ಜಾತಿಯ ವೈಜ್ಞಾನಿಕ ಮಾನದಂಡಗಳ ಮೂಲಕ ಅಧ್ಯಾಯನ ಮಾಡಿ ವಸ್ತುನಿಷ್ಠ್ಠ ವರದಿ ಆಧಾರಿಸಿ ಪರಿಗಣಿಸದೇ ಜನಸಂಖ್ಯೆ ಆಧಾರದ ಮೇಲೆ ಪರಿಶಿಷ್ಟ್ಟ ಜಾತಿಯ ಪಟ್ಟಿಯನ್ನು ತಿದ್ದಿ ಮರು ವರ್ಗೀಕರಿಸಿ ಮೇಲ್ನೋಟಕ್ಕೆ ೫ ಗುಂಪುಗಳನ್ನಾಗಿ ಮಾಡಿರುವುದು ಸಂವಿಧಾನ ವಿರೋಧಿಯಾಗಿದೆ ಎಂದು ಆಪಾದಿಸಿದರು.
ಆಂಧ್ರಪ್ರದೇಶ ರಾಜ್ಯ ಮಾಡಿರುವ ಒಳ ಮೀಸಲಾತಿ ವರ್ಗೀಕರಣ ಮಾಡಿರುವುದು ಅಸಂವಿಧಾನಿಕ ಎಂದು ಒಳ ಮೀಸಲಾತಿ ವಿರುದ್ಧ ತೀರ್ಪು ನೀಡಿತ್ತು. ಹಿಂದಿನ ಬಿಜೆಪಿ ಸರ್ಕಾರ ಸಂವಿಧಾನ ನಡೆ ಅನುಸರಿಸಿ ಪರಿಶಿಷ್ಟ ಜಾತಿಯ ಲಂಬಾಣಿ, ಭೋವಿ, ಕೊರಮ, ಕೊರಚ ಸೇರಿ 99 ಸಮುದಾಯಗಳು ಸ್ಪಷ್ಟ್ಟವಾಗಿ ಒಳ ಮೀಸಲಾತಿಯನ್ನು ವಿರೋಧಿಸಿದೆ. ಸದಾಶಿವ ಆಯೋಗ ವರದಿ ರದ್ದುಮಾಡಬೇಕು ಎಂದು ಒತ್ತಾಯಿಸಿದರು.
ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿವೆ. ದೇಶದಲ್ಲಿ ಅಸ್ಪೃಶ್ಯತೆ ನಿಷೇಧ ಮಾಡಿದರೂ ಸ್ಪರ್ಶ, ಅಸ್ಪರ್ಶ ಎಂಬ ಪರಿಕಲ್ಪನೆಯಡಿ ವರ್ಗೀಕರಣ ಮಾಡಿರುವುದು ಸಂವಿಧಾನದ ಆಶಯಕ್ಕೆ ವಿರೋಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
2023ರ ಮಾರ್ಚ್ 24ರಂದು ಹಿಂದಿನ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ಸಂಬ0ಧ ತೆಗೆದುಕೊಂಡ ನಿರ್ಧಾರ ದಮನಿತರ, ಬುಡಕಟ್ಟುಗಳ ಐಕ್ಯತೆಯನ್ನು ಒಡೆಯುವ ಹುನ್ನಾರವಾಗಿದೆ ಎಂದು ಆರೋಪಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎ.ಈರಣ್ಣ, ಪ್ರಧಾನ ಕಾರ್ಯದರ್ಶಿ ಎನ್ ಶಿವಣ್ಣ ಪವಾರ್, ನರಸಿಂಹಲು ಕಮಲಾಪೂರು, ಮಾಲಾ ಭಜಂತ್ರಿ, ಶಶಿಕಲಾ ಭೀಮರಾಯ ಹಾಗೂ ಮತ್ತಿತರರಿದ್ದರು.
ಸದಾಶಿವ ಆಯೋಗದ ವರದಿ ಜಾರಿಗೆ ಆಕ್ಷೇಪ
