ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಿ

filter: 0; fileterIntensity: 0.0; filterMask: 0; captureOrientation: null; module: photo; hw-remosaic: false; touch: (-1.0, -1.0); modeInfo: HDR ; sceneMode: 8; cct_value: 0; AI_Scene: (-1, -1); aec_lux: 65.0; aec_lux_index: 0; hist255: 0.0; hist252~255: 0.0; hist0~15: 0.0; albedo: ; confidence: ; motionLevel: 0; weatherinfo: null; temperature: 45;
Eshanya Times

ರಾಯಚೂರು,ಏ.೩೦ : ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಮತ್ತು ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಲು ಜಾಗೃತಿ ಮೂಡಿಸುವಂತೆ ರಾಜ್ಯ ಸ್ವೀಪ್ ನೊಡಲ್ ಅಧಿಕಾರಿ ಪಿ.ಎಸ್ ವಸ್ತçದ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಏ.೩೦ರ(ಮಂಗಳವಾರ) ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವೀಪ್ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಲೋಕಸಭಾ ಚುನಾವಣೆ-೨೦೨೪ರ ಹಿನ್ನಲೆಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಮತದಾನದ ದಿನಂದ೦ದು ಮತದಾನ ಮಾಡಲು ಮತಗಟ್ಟೆಗೆ ಆಗಮಿಸುವ ಮತದಾರರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು.
ವಿಶೇಷಚೇತನ ಮತದಾರರಿಗೆ ಅನುಕೂಲವಾಗುವಂತೆ ರ‍್ಯಾಂಪ್ ವ್ಯವಸ್ಥೆ, ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ನೆರಳಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಮೂಲಭೂತ ಸೌಲಭ್ಯಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ಜಿಲ್ಲೆಯ ಎಲ್ಲಾ ಮತದಾರರಿಗೆ ಮತದಾರರ ಮಾರ್ಗದರ್ಶಿ ಮಾಹಿತಿ ಚೀಟಿಯನ್ನು ತಲುಪಿಸಬೇಕು, ಜಿಲ್ಲೆಯ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ಜನರಲ್ಲಿ ಮತದಾನದ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಡಾ.ಬಿ.ವೈ ವಾಲ್ಮೀಕಿ, ರಾಯಚೂರು ತಹಶಿಲ್ದಾರ ಸುರೇಶ ವರ್ಮಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಡಿ ಬಡಿಗೇರ, ರಾಯಚೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ನಗರಸಭೆ ಪೌರಾಯುಕ್ತ ಜಿ.ಎನ್ ಚಲಪತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಈರೇಶ ನಾಯಕ ಸೇರಿದಂತೆ ವಿವಿಧ ತಾಲೂಕು ಪಂಚಾಯತ್‌ಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";