ರಾಯಚೂರು: ಜೂ-19:
ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಲು ಹೊರಡಿಸಿದ ಆದೇಶ ವಿರೋ
ಧಿಸಿ ಸಚಿವ ಎನ್.ಎಸ್.ಬೋಸರಾಜ್ ಮನೆ ಮುಂದೆ ಪ್ರತಿಭಟನೆಗೆ ಅಂಗನವಾಡಿ ಕಾರ್ಯಕರ್ತರು ಮುಂದಾದಗ ಪೊಲೀಸರು ತಡೆದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಮನೆ ಮುಂದಿನ ವಾಲ್ಮೀಕಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಾದ್ಯಂತ ಅಂಗನವಾಡಿಗಳನ್ನು ಬಂದ್ ಮಾಡಿ, ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಸಚಿವರು ಮತ್ತು ಶಾಸಕರ ಮನೆ ಮುಂದೆ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತು. ಆದರೆ ನಗರದಲ್ಲಿರುವ ಸಚಿವ ಎನ್.ಎಸ್.ಬೋಸರಾಜ್ ಅವರ ನಿವಾಸದ ಮುಂದೆ ಪ್ರತಿಭಟನೆ ಮಾಡಲು ಹೊರಟ ಕಾರ್ಯಕರ್ತೆಯರನ್ನು ಜಿಲ್ಲಾಧಿಕಾರಿಗಳ ಮನೆ ಮುಂದಿನ ವಾಲ್ಮೀಕಿ ವೃತದಲ್ಲಿಯೇ ಪೊಲೀಸರು ತಡೆದರು. ಇದರಿಂದ ರೊಚ್ಚಿಗೆದ ನೂರಾರು ಅಂಗನವಾಡಿ ಕಾರ್ಯಕರ್ತೆಯರು ರಸ್ತೆಗೆ ಕುಳಿತು ರಸ್ತೆ ತಡೆ ಆರಂಭಿಸಿದರು.
ನಂತರ ಸಚಿವ ಬೋಸರಾಜ್ ಅಪ್ತ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು. ರಸ್ತೆ ತಡೆಯಿಂದ ಸುಮಾರು ಅರ್ಧ ಗಂಟೆ ಸಂಚಾರ ಸ್ಥಗಿತಗೊಂಡಿತು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಹೆಚ್.ಪದ್ಮಾ, ನರ್ಮದಾ, ಗಂಗಮ್ಮ, ಇಂದಿರಾ, ವಿಲಶಾಕ್ಷಿ,ಅಸ್ಮ, ರಹಿಮತಬೇಗಂ, ವರಲಕ್ಷಿö್ಮ, ಗೋಕಾರಮ್ಮ, ಗೌರಮ್ಮ,ಮಲ್ಲಮ್ಮ, ಬಾಗ್ಯಮ್ಮ, ಡಿ.ಎಸ್.ಶರಣಬಸವ, ಕೆ.ಜಿ.ವೀರೇಶ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದರು.