ಬಾಗಲಕೋಟೆ: ಆಗಸ್ಟ ೨೯ (ಕರ್ನಾಟಕ ವಾರ್ತೆ) : ರಾಷ್ಟಿçÃಯ ಕ್ರೀಡಾ ದಿನಾಚರಣೆ ಅಂಗವಾಗಿ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಗುರುವಾರ ಚಾಲನೆ ನೀಡಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಕ್ರೀಡಾಕೂಟಕ್ಕೆ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಕ್ರೀಡೆ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವಾಗಿದ್ದು, ಮಕ್ಕಳಲ್ಲಿ ಕ್ರೀಡಾ ಸ್ಪೂರ್ತಿ ಬೆಳೆಯಬೇಕು. ಅಂದಾಗ ಮಾತ್ರ ದೈಹಿಕ ಹಾಗೂ ಮಾನಸಿಕ ಸದೃಡವಾಗಲು ಸಾಧ್ಯವಾಗುತ್ತದೆ. ಕ್ರೀಡೆಗಳು ನಮ್ಮನ್ನು ಸದೃಡರನ್ನಾಗಿ ಮಾಡುವುದಲ್ಲದೇ ನಮ್ಮನ್ನು ಕ್ರೀಯಾಶೀಲರನ್ನಾಗಿಸುತ್ತದೆ. ಯುವಕ ಮತ್ತು ಶಾಲಾ ಮಕ್ಕಳನ್ನು ಕ್ರೀಡೆಯತ್ತ ಆಕರ್ಷಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಆಗಸ್ಟ ೨೯ ರಂದು ರಾಷ್ಟಿçÃಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ ಎಂದರು.
ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಕ್ರೀಡಾ ಧ್ವಜಾರೋಣ ನೆರವೇರಿಸಿ ಮಾತನಾಡಿದ ಅವರು ಕ್ರೀಡೆಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ದೈಹಿಕವಾಗಿ ಸಕ್ರಿಯವಾಗಿರಲು ಜನರನ್ನು ಪ್ರೋತ್ಸಾಹಿಸುವ ಸಲುವಾಗಿ ರಾಷ್ಟಿçÃಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಜಿಲ್ಲೆಯ ಕ್ರೀಡಾಪಟುಗಳು ಜಿಲ್ಲಾ, ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಹೆಸರು ಮಾಡುವ ಕೆಲಸ ವಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಕ್ರೀಡಾ ಪ್ರತಿಜ್ಞಾವಿಧಿಯನ್ನು ಬೋದಿಸಲಾಯಿತು. ಪ್ರಾರಂಭದಲ್ಲಿ ಕ್ರೀಡಾ ಜ್ಯೋತಿಯನ್ನು ಸ್ವಾಗಿತಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.