ಸುರಪುರ: ಯಾದಗಿರಿಯಲ್ಲಿ ಜರುಗಿದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಗರದ ರಂಗ0ಪೇಟೆಯ ಪ್ರಿಯದರ್ಶಿನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ದೇವರಾಜ ಶರಣಪ್ಪ ೮೦೦ಮೀ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾನೆ ಹಾಗೂ ಬಾಲಕರ ಹ್ಯಾಂಡ್‌ಬಾಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನಗೆ ಸಂಸ್ಥೆಯ ಅಧ್ಯಕ್ಷ ಭೀಮಣ್ಣ ಬಿಲ್ಲವ್ ಹಾಗೂ ಕಾಲೇಜಿನ ಪ್ರಾಂಶುಪಾಲ ನಿಂಗಣ್ಣ ಹೆಗ್ಗನದೊಡ್ಡಿ ಮತ್ತು ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.