ರಾಯಚೂರು,ಆ.30: ಅಂಗವಿಲರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕೆಲಸ ಮಾಡುತ್ತಿರುವ ಪುನರ್ವಸತಿ ಕಾರ್ಯಕರ್ತರ ಎಂ.ಆರ್.ಡಬ್ಲ್ಯೂ.ವಿ.ಆರ್.ಡಬ್ಲ್ಯೂ,ಯು.ಆರ್.ಡಬ್ಲ್ಯೂ ಸೇರಿದಂತೆ ವಿಕಲಚೇತನರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿಧೋದ್ದೇಶ ಮತ್ತು ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣ ದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿ,
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಕಲಚೇತನರ ಕಾಯ್ದೆ-2016ರ ಸೆಕ್ಷನ್-72ರಡಿ ಜಿಲ್ಲಾ ಮಟ್ಟದ ಜಿಲ್ಲಾ ಸಮಿತಿ ಸಭೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಕರೆಯಬೇಕು,ಎಲ್ಲಾ ತಾಲೂಕುಗಳ ತಾಲೂಕ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಮಿತಿಯ ಸದಸ್ಯರುಗಳನ್ನಾಗಿ ಪರಿಗಣಿಸಬೆಕು, ಶೇ.೫ರಷ್ಟು ಅನುದನ ಬಗ್ಗೆ ಕಾರ್ಯಾಗಾರ ಹಮ್ಮಿಕೊಳ್ಳಬೇಕು, ಸಚಿವರು ಹಾಗೂ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯುವ ಕೆಡಿಪಿ ಹಾಗೂ ಸಾಮಾನ್ಯ ಸಭೆಗಳಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಶೇ.೫ರಷ್ಟು ಅನುದಾನದ ಚರ್ಚೆ ಮಾಡಬೇಕು ಸೇರಿದಂತೆ ಅನೇಕ ಬೇಡಿಕೆಗಳು ಈಡೇರಿಸಲು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಜಿ.ಎನ್.ನಾಗರಾಜ,ಜಿಲ್ಲಾಧ್ಯಕ್ಷ ಶೇಖರಪ್ಪ ಮುರ್ಕಿಗುಡ್ಡ,ಗೌರವಾಧ್ಯಕ್ಷೆ ಸಂಗಮ್ಮ ನರಕಲದಿನ್ನಿ, ಉಪಾಧ್ಯಕ್ಷ ಮಲ್ಲಪ್ಪ ಗಲಗ,ರಾಜಶೇಖರ ಕಟ್ಲಟ್ಕೂರು, ಮಲ್ಲೇಶ ಹೀರಾಪೂರ, ಬಸವರಾಜ್ ಗೋರೆಬಾಳ, ಸಂತೋಷ ಕುಮಾರ, ಈರೇಶ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಿಕಲಚೇತನರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
WhatsApp Group
Join Now