ರಾಯಚೂರು,ಜು.10: ಕೇಂದ್ರ ಬಜೆಟ್‌ನಲ್ಲಿ ಜಿಲ್ಲೆಗೆ ಏಮ್ಸ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲಾ ಮತ್ತು ತಾಲೂಕ ಕೇಂದ್ರಗಳಲ್ಲಿ ಜು.16 ರಂದು ಪ್ರತಿಭಟನೆ ನಡೆಸಲಾಗುವುದೆಂದು ಏಮ್ಸ್ ಹೋರಾಟ ಸಮಿತಿ ಸಂಚಾಲಕ ಬಸವರಾಜ್ ಕಳಸ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಂಡು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗಾಗಿ ಹೋರಾಟ ರೂಪಿಸಲು ಸಭೆ ನಡೆಸಿ ಜು.16 ರಂದು ಎಲ್ಲಾ ಜಿಲ್ಲಾ ಮತ್ತು ತಾಲೂಕ ಕೇಂದ್ರದಲ್ಲಿ ಹೋರಾಟ ನಡೆಸಿ ಒಗ್ಗಟು ಪ್ರದರ್ಶಿಸಲಾಗುವುದೆಂದರು.
ನಗರದ ರಾಜ್ಯದ 5 ಜನ ಸಚಿವರನ್ನು ಭೇಟಿ ಮಾಡಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಧ್ವನಿ ಎತ್ತಬೇಕೆಂದು ಅವರಲ್ಲಿ ಮನವಿ ಮಾಡಲಾಗುವುದೆಂದರು.
ಕಲ್ಯಾಣ ಕರ್ನಾಟಕ ಭಾಗದ ಸಂಸದರು ಪಾರ್ಲಿಮೆಂಟನಲ್ಲಿ ಏಮ್ಸ್ ಸ್ಥಾಪನೆಗೆ ಒಗ್ಗಟು ಪ್ರದರ್ಶನ ಮಾಡಿ ಜಿಲ್ಲೆಗೆ ಏಮ್ಸ್ ಘೋಷಣೆ ಮಾಡಿಸಬೇಕೆಂದರು.
ಬಜೆಟ್‌ನಲ್ಲಿ ಘೋಷಣೆ ಮಾಡದೇ ಇದ್ದಲಿ ದೆಹಲಿಯಲ್ಲಿನ ಕನ್ನಡಿಗರನ್ನು ಒಗ್ಗೂಡಿಸಿಕೊಮಡು ಆ.6 ರಿಂದ 12 ರವರಗೆ ನಿರಂತರವಾಗಿ ಜಂತರ್ ಮಂಥರನಲ್ಲಿ ಹೋರಾಟ ನಡೆಸಲಾಗುತ್ತದೆ ಎಂದರು. ಈ ಕುರಿತು ಈಗಾಗಲೇ ದೆಹಲಿಯ ಕನ್ನಡಿಗರೊಂದಿಗೆ ಚರ್ಚಿಸಿದ್ದು, ಹೋರಾಟಕ್ಕೆ ಬೆಂಬಲಿಸುವುದಾಗಿ ಭರವಸೆ ನೀಡಿದ್ದಾರೆಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಧ್ವನಿ ಎತ್ತುವಂತೆ ಮನವಿ ಸಲ್ಲಿಸಲಾಗುವುದೆಂದರು.
ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನಗೆ ಮನವಿ ಮಾಡಿದ್ದಾರೆ. ಕೇಂದ್ರ ಸರಕಾರ ಏಮ್ಸ್ ರಾಯಚೂರಿನಲ್ಲಿ ಸ್ಥಾಪನೆಗೆ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಶೋಕ ಕುಮಾರ ಜೈನ್,ವಿನೋದರೆಡ್ಡಿ, ಜಾನ್‌ವೆಸ್ಲಿ ಉಪಸ್ಥಿತರಿದ್ದರು.