ಬೀದರ: ಮಾ. ೦೪:
ಚುನಾವಣಾ ಪುರ್ವದಲ್ಲಿ ಘೋಷಣೆ ಮಾಡಿದಂತೆ ೫ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು ಮನೆ-ಮನೆಗೆ ತಲುಪಿಸಿದೇವೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದರು.
ಇಂದು ಸೋಮವಾರ ಜಿಲ್ಲಾಡಳಿತ ಬೀದರ ವತಿಯಿಂದ ಚಿಟಗುಪ್ಪಾ ಪಟ್ಟಣದ ರಘೋಜಿ ಫಂಕ್ಷಾನ್ ಹಾಲ್‌ನಲ್ಲಿ ಏರ್ಪಡಿಸಿದ ಸಾರ್ವಜನಿಕ ಕುಂದುಕೊರತೆಗಳ ಜನಸ್ಪಂದನಾ ಸಭೆ ಮತ್ತು ೫ ಗ್ಯಾರಂಟಿಗಳ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಗೃಹಲಕ್ಷಿ ಯೋಜನೆಯಡಿಯಲ್ಲಿ ೩ ಲಕ್ಷ ೨೦ ಸಾವಿರ ಮಹಿಳೆಯರು ಇದರ ಲಾಭವನ್ನು ಪಡೆಯುತ್ತಿದ್ದು, ಗೃಹಜ್ಯೋತಿ ಯೋಜನೆಯಡಿ ೩ ಲಕ್ಷ ೫೦ ಸಾವಿರ ಜನರು ಉಚಿತ ವಿದ್ಯುತ್ ಯೋಜನೆ ಲಾಭ ಪಡೆಯುತ್ತಿದ್ದಾರೆ.
ಅನ್ನಭಾಗ್ಯ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ೩ ಲಕ್ಷ ೧೦ ಸಾವಿರ ಬಿ.ಪಿ.ಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರು ೧೧ ಲಕ್ಷ ೪೦ ಸಾವಿರ ಫಲಾನುಭವಿಗಳಿಗೆ ಪ್ರತಿ ತಿಂಗಳು ೧೮ ಕೋಟಿ ೫೫ ಲಕ್ಷ ಡಿ.ಬಿ.ಟಿ ಮುಖಾಂತರ ಹಣ ಪಾವತಿಸಲಾಗಿದೆ.
ಶಕ್ತಿ ಯೋಜನೆಯಡಿಯಲ್ಲಿ ಇಲ್ಲಿವರೆಗೆ ಜಿಲ್ಲೆಯಲ್ಲಿ ೩ ಕೋಟಿ ಮಹಿಳೆಯರು ಉಚಿತ ಬಸ್ ಸಂಚಾರದ ಲಾಭ ಪಡೆದಿದ್ದಾರೆ. ಯುವನಿಧಿ ಯೋಜನೆಯಡಿಯಲ್ಲಿ ೨ ಸಾವಿರ ವಿಧ್ಯಾರ್ಥಿಗಳು ಯುವನಿಧಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ನಮ್ಮ ಸರ್ಕಾರ ಜನರ ವಿಶ್ವಾಸಕ್ಕೆ ಎಂದು ದ್ರೋಹ ಬಗೆದಿಲ್ಲ. ಬಡವರ, ದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗದವರ ಏಳಿಗೆಗೆ ಸದ ಬದ್ಧವಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಅರ್ಥಿಕ ಸಬಲತೆ ಸೃಷ್ಠಿಯಾಗುವ ಬಡ ಅರ್ಥಿಕ ಗುಣಮಟ್ಟ ಹೆಚ್ಚಾಗುತ್ತಿದೆ. ಬ್ರಷ್ಟಾಚಾರ ರಹಿತವಾಗಿ ಗ್ಯಾರಂಟಿ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪುವುದರ ಮೂಲಕ ಗ್ಯಾರಂಟಿ ಸಮಾವೇಶ ಸಾರ್ಥಕ ಸಮಾವೇಶ ಆಗಿದೆ ಎಂದು ಹೇಳಿದರು.
ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ಮಾತನಾಡಿ ಬಡವರು, ವೃದ್ಧರು, ಹಿಂದುಳಿದವರಿಗಾಗಿ ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ತಂದು ಅವರ ಮನೆ ಬಾಗಿಲಿಗೆ ತಲುವಂತೆ ಮಾಡಲಾಗಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಬಿ. ಪಾಟೀಲ್ ಅವರು ಮಾತನಾಡಿ ಗ್ಯಾರಂಟಿ ಸಮಾವೇಶಗಳನ್ನು ಮಾಡುವ ಮೂಲಕ ಸಾರ್ವಜನಿಕ ಸಮಸ್ಯೆಗಳನ್ನು ಸ್ಥಳದಲ್ಲಿ ಬಗೆಹರಿಸಲಾಗುತ್ತಿದೆ. ಇದರ ಲಾಭವನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳಬೇಕೆಂದು ತಿಳಿಸಿದರು.
ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಈ ಸಂದರ್ಭದಲ್ಲಿ ಸಾರ್ವಜನಿಕ ಕುಂದಕೊರತೆಗಳ ಅರ್ಜಿಗಳನ್ನು ಸ್ವೀಕರಿಸಿ ವಿದ್ಯುಚ್ಛಕ್ತಿ ಸಂಪರ್ಕ, ರೇಶನ್ ಕಾರ್ಡ ತಿದ್ದುಪಡಿ ಸಮಸ್ಯೆಗಳು, ಮನೆ ಮಂಜೂರಾತಿ, ಭೂಮಿ ಮಂಜೂರಾತಿ, ರಸ್ತೆ ಒತ್ತುವರಿ ಸೇರಿದಂತೆ ಇನ್ನಿತರ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿ ಕೊಡಲೇ ಬಗೆಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾರ್ಯಕ್ರದಮಲ್ಲಿ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗೀರಿಶ್ ದೀಲಿಪ್ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಚನ್ನಬಸವಣ್ಣ ಲಂಗೋಟಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಮ್.ಎಮ್, ಸಹಾಯಕ ಆಯುಕ್ತರಾದ ಪ್ರಕಾಶ ಸಾದೂರೆ, ತಹಸೀಲ್ದಾರರಾದ ರವೀಂದ್ರ ದಾಮಾ, ಪುರಸಭೆ ಮುಖ್ಯಾಧಿಕಾರಿ ಒಸೊಮೊದ್ದುದೀನ್ ಬಾಬಾ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.