ರಾಯಚೂರು,ಮಾ.5:
ಸರ್ಕಾರದಿಂದ ರಾಜ್ಯದ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಹಿತದೃಷ್ಠಿಯಿಂದ ಸರ್ಕಾರಿ ಸಾರಿಗೆ ವಲಯದಲ್ಲಿ ಹಲವು ಸೌಲಭ್ಯಗಳನ್ನು ನೀಡಲಾಗಿದ್ದು, ರಾಯಚೂರು ಜಿಲ್ಲೆಗೆ ನೂತನ ಬಸ್‌ಗಳನ್ನು ಒದಗಿಸಲಾಗಿದೆ. ಸಾರ್ವಜನಿಕರಿಗೆ ಸುಸ್ಸಜಿತ, ಸುರಕ್ಷಿತ ಪ್ರಯಾಣದ ಸೇವೆಯನ್ನು ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದರು.
ಅವರು ಮಾ.೫ರ(ಮಂಗಳವಾರ) ನಗರದ ಗ್ರಾಮೀಣ ಬಸ್ ಘಟಕ-೦೧ರಲ್ಲಿ ಕಲ್ಯಾಣ ಕನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ಸರ್ಕಾರದ ೧೦೦ ಕೋಟಿ ರೂ.ಗಳ ಅನುದಾನದಲ್ಲಿ ಖರೀದಿಸಿದ ೨೫೦ ನೂತನ ಬಸ್‌ಗಳ ಲೋಕಾಪ್ಣೆ, ರಾಯಚೂರು ಗ್ರಾಮೀಣ ಬಸ್ ಘಟಕ ಉದ್ಘಾಟನೆ ಹಾಗೂ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣಾ ಸಮಾರಂಭವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರದಿಂದ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ೯ ವಿಭಾಗಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದು, ೫೨ ಘಟಕಗಳನ್ನು ಹೊಂದಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಟ್ಟು ೧೬೪ ಬಸ್ ನಿಲ್ದಾಣಗಳಿದ್ದು, ಪ್ರತಿ ನಿತ್ಯ ೧೭.೭೮ ಲಕ್ಷ ಪ್ರಯಾಣಿಕರು ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ ಪ್ರಯಾಣವನ್ನು ಮಾಡುತ್ತಿದ್ದಾರೆ ಎಂದರು.
ಸರ್ಕಾರದಿಂದ ಜಾರಿಗೆ ತರಲಾದ ಶಕ್ತಿ ಯೋಜನೆಯಿಂದ ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದ್ದು, ಶಕ್ತಿ ಯೋಜನೆಯು ಜಾರಿಯಾದ ನಂತರ ರಾಜ್ಯದ ಜನರ ಆರ್ಥಿಕತೆ ಸ್ಥಿರವಾಗಿದೆ. ಕರ್ನಾಟಕ ರಾಜ್ಯದ ೪ ನಿಗಮಗಳಲ್ಲಿ ಶಕ್ತಿ ಯೋಜನೆಯಡಿ ೧೬೨.೮೮ ಕೋಟಿ ಮಹಿಳೆಯರು ಪ್ರಯಾಣ ಬೆಳೆಸಿದ್ದು, ಒಟ್ಟು ೩೮೯೪.೨೮ ಕೋಟಿ ಮೌಲ್ಯದ ಟಿಕೇಟ್ ಮೊತ್ತವಾಗಿದೆ ಎಂದು ತಿಳಿಸಿದರು.
ಶಕ್ತಿ ಯೋಜನೆಯು ಜಾರಿಯಾದ ನಂತರ ರಾಯಚೂರು ಜಿಲ್ಲೆಯಲ್ಲಿ ೫೬ ಹೊಸ ಅನುಸೂಚಿಗಳನ್ನು ಪ್ರಾರಂಭಿಸಲಾಗಿದ್ದು, ಶಕ್ತಿ ಯೋಜನೆಯ ಮೊದಲು ೧.೪೦ ಲಕ್ಷ ಪ್ರಯಾಣಿಕರ ಸಂಖ್ಯೆಯಿದ್ದು, ಪ್ರಸ್ತು ಜಿಲ್ಲೆಯಲ್ಲಿ ೨.೧೪ ಕೋಟಿ ಜನರು ಶಕ್ತಿ ಯೋಜನೆಯ ನಂತರ ಬಸ್‌ಗಳಲ್ಲಿ ಪ್ರಯಾಣ ಬೆಳೆಸುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯನ್ನು ಜಾರಿಗೊಳಿಸಿ ಮಹಿಳೆಯರಿಗೆ ಉಚಿತವಾದ ಪ್ರಯಾಣದ ಸೌಲಭ್ಯವನ್ನು ನೀಡಲಾಗಿದ್ದು, ಸರ್ಕಾರದ ಈ ಯೋಜನೆಯಿಂದ ಮಹಿಳೆಯರಲ್ಲಿ ಶಕ್ತಿ ತುಂಬಿದAತಾಗಿದೆ ಎಂದು ತಿಳಿಸಿದರು.
ಪ್ರಯಾಣಿಕರ ರಕ್ಷಣೆಯಲ್ಲಿ ಸಾರಿಗೆ ನಿಗಮದ ಚಾಲಕರು, ನಿರ್ವಾಹಕರು ಹಾಗೂ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉತ್ತಮ ಹಾಗೂ ಜವಾಬ್ದಾರಿಯುತವಾದ ಕಾರ್ಯವನ್ನು ನಿರ್ವಹಿಸುತ್ತಿದ್ದು, ಅವರ ಕುಂದು ಕೊರತೆಗಳನ್ನು ಸರ್ಕಾರದಿಂದ ಆಲಿಸಿ ಪರಿಹಾರ ನೀಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಅಪಘಾತ ರಹಿತ ಚಾಲನೆಯನ್ನು ಮಾಡಿದ ಚಾಲಕರಿಗೆ ಬೆಳ್ಳಿ ಪದಕವನ್ನು ವಿತರಿಸಿ ಸನ್ಮಾನಿಸಲಾಯಿತು. ನಂತರ ಮೃತಾವಲಂಬಿತರಿಗೆ ೧೦ ಲಕ್ಷ ಪರಿಹಾರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಉಪಾಧ್ಯಕ್ಷ ಬಸೀರ್ ಆಹ್ಮದ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲಬುರಗಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ, ಮುಖ್ಯ ಸಂಚಾರ ವ್ಯವಸ್ಥಾಪಕ ವಿ.ಎಚ್ ಸಂತೋಷ, ಮುಖ್ಯ ತಾಂತ್ರಿಕ ಶಿಲ್ಪಿ ಸಂತೋಷ ಗೋಗೇರಿ, ಮುಖ್ಯ ಕಾಮಗಾರಿ ಅಭಿಯಂತರ ಬೋರೆಡ್ಡಿ, ಮುಖ್ಯ ಕಾನೂನು ಅಧಿಕಾರಿ ಎಸ್.ಎಸ್ ಭಾವಿಕಟ್ಟಿ, ಉಪಮುಖ್ಯ ಕಾಮಗಾರಿ ತಾಂತ್ರಿಕ ಶಿಲ್ಪಿ ವಿ.ಎಚ್ ಪುರಾಣಿಕ, ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ ಎಂ.ಎಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.