ಬೆಂಗಳೂರು: ಮೇ-20:
ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು ೨೦೨೪-೨೫ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್, ಸೇರಿದಂತೆ ಭೋದನಾ ಶುಲ್ಕವನ್ನು ಹೆಚ್ಚಳ ಮಾಡಿ ಡೊನೇಷನ್ ಹೆಸರಿನಲ್ಲಿ ಹಣ ವಸೂಲಿ ಮಾಡಲು ಮುಂದಾಗಿರುವುದನ್ನು ಎಸ್‌ಎಫ್‌ಐ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.
ಸೋಮುವಾರದAದು ಎಸ್‌ಎಫ್‌ಐ ನೇತೃತ್ವದ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ. ಕಾವೇರಿ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರಿಗೆ ಭೇಟಿಯಾಗಿ ಮನವಿ ಪತ್ರ ಸಲ್ಲಿಸಲಾಯಿತು.
ಈಗಾಗಲೇ ಬೇಬಿ ಕ್ಲಾಸಿನಿಂದ ಎಲ್ಲಾ ತರಗತಿಯ ಪ್ರವೇಶಯನ್ನು ಪ್ರಾರಂಭಿಸಿ ವಿದ್ಯಾರ್ಥಿಗಳು ಪಾಲಕರಿಂದ ಡೊನೇಷನ್ ವಸೂಲಿಗೆ ಮುಂದಾಗಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರೂ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ಆಯುಕ್ತರು, ಅಪರ ಆಯುಕ್ತರು, ವಿವಿಧ ಜಿಲ್ಲೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿರುವುದು ಏಕೆ ಎಂದು ನಿಯೋಗ ಪ್ರಶ್ನೆ ಮಾಡಿತ್ತು.
ಸರ್ಕಾರದ ೧೯೮೩ ಶಿಕ್ಷಣ ಕಾಯ್ದೆಯನ್ನು ಉಲ್ಲಂಘನೆ ಮಾಡಿ ರಾಜ್ಯದ ಬಹುತೇಕ ಶಾಲೆಗಳಲ್ಲಿ ಬಟ್ಟೆ, ಶೂ ಸಾಕ್ಸ್, ನೋಟ್ ಬುಕ್ ಗಳನ್ನು ಶಾಲೆಗಳಲ್ಲಿ ಮಾರಾಟ ಮಾಡುತ್ತಿರುವುದು ಕಾನೂನು ಬಾಹಿರ ಹಾಗೂ ಶಿಕ್ಷಣ ಇಲಾಖೆಯ ೧೯೮೩ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿರುವ ಶಾಲೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಯಿತು.
೨೦೨೪-೨೫ ನೇ ಶೈಕ್ಷಣಿಕ ವರ್ಷದ ವಾರ್ಷಿಕ ಶುಲ್ಕದಲ್ಲಿ ಕೇವಲ ಬೋಧನ ಶುಲ್ಕ ಮಾತ್ರ ತೆಗೆದುಕೊಳ್ಳಲು ಆದೇಶ ಮಾಡಿ ಯಾವುದೇ ಕಾರಣಕ್ಕೂ ಆನ್ಲೈನ್ ಶಿಕ್ಷಣ ನೀಡುವುದು ಸರಿಯಾದ ಕ್ರಮವಲ್ಲ. ೧೯೮೩ರ ಶಿಕ್ಷಣ ಕಾಯಿದೆ ಪ್ರಕಾರ ಎಲ್ಲಾ ಖಾಸಗಿ ಶಾಲೆಗಳು ಪ್ರವೇಶಾತಿಗೆ ಖಾಲಿ ಇರುವ ಸೀಟುಗಳನ್ನು ತಮ್ಮ ಶಾಲೆಯ ನೋಟಿಸ್ ಬೋರ್ಡ್ಗೆ ಹಾಕಬೇಕು, ಮತ್ತು ರೋಸ್ಟರ್ ನಿಯಮ ಜಾರಿ ಮಾಡಿ, ಶುಲ್ಕವನ್ನು ನಿಗದಿಗೊಳಿಸಿ ಶಾಲೆಯ ಮುಂಭಾಗದಲ್ಲಿ ಹಾಕಬೇಕೆಂದು ನಿಯಮ ಇದ್ದರು ರಾಜ್ಯದಲ್ಲಿ ಯಾವ ಶಾಲೆಗಳು ಸಹ ಜಾರಿಮಾಡಿರುವುದಿಲ್ಲ. ಈ ಕುರಿತು ಅನೇಕ ಬಾರಿ ವಿವಿಧ ಜಿಲ್ಲೆಗಳಲ್ಲಿ ಸಂಬAಧಪಟ್ಟ ಡಿಡಿಪಿಐ, ಬಿಇಒ ರವರಿಗೆ ನಮ್ಮ ಸಂಘಟನೆಯ ಕಾರ್ಯಕರ್ತರು ಮನವಿ ಮಾಡಿದರು ಕ್ರಮ ಜರುಗಿಸಲು ಮುಂದಾಗಿಲ್ಲ. ಸರ್ಕಾರದ ಅಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಲು ಹಿಂದೇಟು ಹಾಕುವುದು ಯಾಕೆ? ಖಾಸಗಿ ಶಾಲೆಗಳ ಜೊತೆ ನಿಮ್ಮ ಇಲಾಖೆಯ ಅಧಿಕಾರಿಗಳು ಹೊಂದಾಣಿಕೆ ಮಾಡಡಿಕೊಂಡಿದ್ದಾರೆ ಎಂಬ ಅನುಮಾನ ಬರುತ್ತದೆ ಎಂದು ಆರೋಪಿಸಲಾಯಿತು.
ಕೂಡಲೇ ಅಂತಹ ಶಾಲೆಗಳ ಮೇಲೆ ಕಾನೂನು ಕ್ರಮ ಜರುಗಿಸಿ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ರೇಗುಲೇಟಿಂಗ್ ಪ್ರಾಧಿಕಾರ ರಚಿಸಿ ಶಾಲೆಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಸೂಚನೆ ಕೊಡಿ ಹಾಗೂ ಎಸ್‌ಎಫ್‌ಐ ಸಂಘಟನೆಯ ಮುಖಂಡರನ್ನು ಒಳಗೊಂಡAತೆ ಜಂಟಿ ಸಭೆ ನಡೆಸಬೇಕೆಂದು ಒತ್ತಾಯಿಸಲಾಯಿತು.
ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಆಯುಕ್ತರು ಹಾಗೂ ಎಸ್ಎಫ್ಐ ಸಂಘಟನೆ ಮುಂಖಡರು ಜೊತೆಗೆ ಜಂಟಿ ಸಭೆ ಮಾಡಬೇಕು. ವಿವಿಧ ಜಿಲ್ಲೆಗಳಲ್ಲಿರುವ ಡಿಡಿಪಿಐ, ಹಾಗು ಬಿಇಒ ಗಳಿಗೆ ಆದೇಶ ಮಾಡಿ ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ್, ಕಾರ್ಯದರ್ಶಿ ಭೀಮನಗೌಡ ರಾಜ್ಯ ಪದಾಧಿಕಾರಿಗಳಾದ ಶಿವಕುಮಾರ್ ಮ್ಯಗಳಮನಿ, ರಮೇಶ ವೀರಾಪೂರು, ಶಿವಪ್ಪ , ವಿಶ್ವ ಅಂಗಡಿ, ಚಿದಾನಂದ, ಬಾಬು ಇದ್ದರು.