ಸಿರವಾರ,ಜು.೨೩ : ತಾಲೂಕಿನ ಮಾಡಗಿರಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ವಾಂತಿ ಬೇದಿಯಿಂದ ಅಸ್ವಸ್ಥರಾದ ರೋಗಿಗಳನ್ನು ಆಸ್ಪತ್ರೆಗೆ ದಾಖಲಾದ ಘಟನೆಗೆ ಸಂಬಂಧಿಸಿ, ತಹಸೀಲ್ದಾರ ರವಿ.ಎಸ್’.ಅಂಗಡಿ ಅವರು ಮಂಗಳವಾರ ಮಾಡಗಿರಿ ಗ್ರಾಮದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕಲುಷಿತ ನೀರು ಕುಡಿದು ಅಸ್ವಸ್ಥರಾದವರ ಆರೋಗ್ಯವನ್ನು ವಿಚಾರಿಸಿದರು.
ನಂತರ ಗ್ರಾಮ ಪಂಚಾಯಿತಿ ಕರ‍್ಯಾಲಯದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ಮಾತನಾಡಿದ ಅವರು, ಕಲುಷಿತ ನೀರು ಸೇವನೆಯಿಂದ ವಾಂತಿ-ಬೇಧಿ ಕಾಣಿಸಿಕೊಂಡು ಅಸ್ವಸ್ಥತೆಗೆ ಒಳಗಾದವರಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡಿ ಶೀಘ್ರವೇ ಚೇತರಿಸಿಕೊಳ್ಳುವಂತೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಜಲಮೂಲಗಳನ್ನು ಕಾಲಕಾಲಕ್ಕೆ ಸ್ವಚ್ಛತೆ ಮಾಡಬೇಕು ಮತ್ತು ಪೈಪ್’ಲೈನ್’ ಲೀಕೇಜ್’ಗಳನ್ನು ತ್ವರಿತಗತಿಯಲ್ಲಿ ಸರಿಪಡಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಂರ‍್ಭದಲ್ಲಿ ತಾಪಂ.ಕರ‍್ಯನರ‍್ವಾಹಕ ಶಶಿಧರ ಸ್ವಾಮ, ಪಿಎಸ್’ಐ ಗುರುಚಂದ್ರ ಯಾದವ್’,ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರತ್ನ ನಾಯಕ, ಮಾನ್ವಿ ಆರ್’ಡಬ್ಲ್ಯೂ.ಎಸ್’ ಉಪ ವಿಭಾಗದ ಎಇಇ ಸತೀಶ್’ ಹಾಗೂ ಗ್ರಾ.ಪಂ.ಸದಸ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಅನೇಕರು ಇದ್ದರು